ಮಂಗಳೂರು: ಆಶ್ರಯ ಕೇಂದ್ರದಲ್ಲಿ ಜೋಡುಪಾಲ ಸಂತ್ರಸ್ತ ಮೃತಪಟ್ಟ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಅರಂತೋಡುವಿನ ತೆಕ್ಕಿಲ್ ಸಮುದಾಯ ಭವನದಲ್ಲಿ ನಡೆದಿದೆ.ಅಂಗಾರ(60) ಮೃತಪಟ್ಟ ಸಂತ್ರಸ್ತ. ಇವರು ಕೊಡಗು ಜಿಲ್ಲೆಯ ಮೊಣ್ಣಂಗೇರಿ ಗ್ರಾಮದ ನಿವಾಸಿಯಾಗಿದ್ದಾರೆ. ಇವರಿಗೆ ರಾತ್ರಿ 1 ಗಂಟೆ ಸುಮಾರಿಗೆ ತೀವ್ರವಾಗಿ ಎದೆ ನೋವು ಕಾಣಿಸಿಕೊಂಡಿದೆ. ಕೂಡಲೇ ಅಂಗಾರ ಅವರನ್ನು ಆಸ್ಪತ್ರೆಗೆ ಸಾಗಿಸುವ ವೇಳೆ ದಾರಿ ಮಧ್ಯೆಯೇ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.ಅಂಗಾರ ಅವರಿಗೆ ಹೃದಯ ಸಂಬಂಧಿತ ಕಾಯಿಲೆ ಇತ್ತು. ಕೊಡಗಿನಲ್ಲಿ ಆದ ಘಟನೆಯಿಂದ ಅವರು ಸಾಕಷ್ಟು ನೊಂದಿದ್ದರು. ಕೊಡಗಿನಲ್ಲಿ ಪ್ರವಾಹದಿಂದಾಗಿ ಸಾಕಷ್ಟು ಜನರಲ್ಲಿ ಈ ಸಮಸ್ಯೆಯಾಗುತ್ತಿತ್ತು. ತಕ್ಷಣಕ್ಕೆ ಸೂಕ್ತ ಚಿಕಿತ್ಸೆ ಹಾಗೂ ಹೆಚ್ಚಿನ ಚಿಕಿತ್ಸೆ ಸಿಗುತ್ತಿರಲಿಲ್ಲ. ಈ ಕಾರಣಕ್ಕಾಗಿ ಅಂಗಾರ ಸಾವನ್ನಪ್ಪಿದ್ದಾರೆ ಎಂದು ಹೇಳಲಾಗಿದೆ.ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictvSign in to your account
Username or Email Address


Password

 Remember Me


