ದಾವಣಗೆರೆ: ಶಾಲಾ ಮುಖ್ಯ ಶಿಕ್ಷಕರೊಬ್ಬರು ತರಗತಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಹರಪ್ಪನಹಳ್ಳಿ ತಾಲೂಕಿನ ಕಮ್ಮತಹಳ್ಳಿ ಗ್ರಾಮದಲ್ಲಿ ನಡೆದಿದೆ.ಮಲ್ಲೇಶಪ್ಪ(56) ಎಂಬವರು ಆತ್ಮಹತ್ಯೆ ಮಾಡಿಕೊಂಡ ಶಿಕ್ಷಕ. ಹರಪ್ಪನಹಳ್ಳಿ ತಾಲೂಕಿನ ಕಮ್ಮತಹಳ್ಳಿ ಗ್ರಾಮದ ಖಾಸಗಿ ಶಾಲೆಯಲ್ಲಿ ಮುಖ್ಯ ಶಿಕ್ಷಕರಾಗಿ ಕಾರ್ಯನಿರ್ವಹಿಸುತ್ತಿದ್ದರು.ಎಂದಿನಂತೆ ಬೆಳಗ್ಗೆ ಮುಖ್ಯ ಶಿಕ್ಷಕ ಮಲ್ಲೇಶಪ್ಪ ಅವರು ಶಾಲೆಗೆ ಬಂದಿದ್ದರು. ಈ ವೇಳೆ ಸಹ ಶಿಕ್ಷಕರೊಬ್ಬರು ಬಂದು ನೋಡಿದಾಗ ತರಗತಿಯಲ್ಲೇ ನೇಣಿಗೆ ಶರಣಾನಾಗಿದ್ದಾರೆ. ಆತ್ಮಹತ್ಯೆಗೆ ಶರಣಾಗಿದ್ದು ಯಾಕೆ ಎನ್ನುವ ಕಾರಣ ತಿಳಿದುಬಂದಿಲ್ಲ. ಸ್ಥಳಕ್ಕೆ ಅರಸೀಕೆರೆ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದು, ಘಟನೆ ಕುರಿತು ಪ್ರಕರಣ ದಾಖಲಿಸಿಕೊಂಡಿದ್ದಾರೆ.ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictvSign in to your account
Username or Email Address


Password

 Remember Me


