ಬೆಂಗಳೂರು: ಕಡೂರು ವಿಧಾನಸಭೆ ಕ್ಷೇತ್ರದ ಮಾಜಿ ಶಾಸಕ ವೈ.ಎಸ್.ವಿ.ದತ್ತಾ ಪತ್ನಿ ಆರ್.ನಿರ್ಮಲಾ (60) ವಿಧಿವಶರಾಗಿದ್ದಾರೆ.ಕ್ಯಾನ್ಸರ್‍ನಿಂದ ಬಳಲುತ್ತಿದ್ದ ನಿರ್ಮಲಾ ಅವರನ್ನು ನಗರದ ಶಂಕರ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೇ ಬುಧವಾರ ಸಂಜೆ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.ರಾಜಾಜಿನಗರ ನಿವಾಸದಲ್ಲಿ ನಾಳೆ ಬೆಳಗ್ಗೆ 10 ಗಂಟೆಯವರೆಗೆ ಅಂತಿಮ ದರ್ಶನಕ್ಕೆ ಅವಕಾಶ ಮಾಡಲಾಗಿದೆ. ಬಳಿಕ ಚಿಕ್ಕಮಗಳೂರಿನ ಕಡೂರು ತಾಲೂಕಿನ ಯಗಟಿ ಗ್ರಾಮದಲ್ಲಿರುವ ದತ್ತಾ ಅವರ ತೋಟದಲ್ಲಿ ಗುರುವಾರ ಸಂಜೆ 4 ಗಂಟೆಗೆ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ. ಪುತ್ರಿಯನ್ನು ನಿರ್ಮಲಾ ಅಗಲಿದ್ದಾರೆ.ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictvSign in to your account
Username or Email Address


Password

 Remember Me


