ಬೆಂಗಳೂರು: ಮಂಡ್ಯ (Mandya) ಜಿಲ್ಲೆಯ ನಾಗಮಂಗಲ (Nagamangala) ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸರ್ಕಾರದ ವಿರುದ್ಧ ಕೇಂದ್ರ ಸಚಿವ ಮಂಡ್ಯ ಸಂಸದ ಹೆಚ್‌ ಡಿ ಕುಮಾರಸ್ವಾಮಿ (HD Kumaraswamy) ಕಿಡಿಕಾರಿದ್ದಾರೆ. ಘಟನೆ ಕುರಿತು ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಕುಮಾರಸ್ವಾಮಿ ನಾಗಮಂಗಲದಲ್ಲಿ ಶಾಂತಿ ಸ್ಥಾಪನೆಗೆ ಕರೆ ನೀಡಿದ್ದಾರೆ.ಕುಮಾರಸ್ವಾಮಿ ಹೇಳಿದ್ದೇನು?
ಮಂಡ್ಯ ಜಿಲ್ಲೆ ನಾಗಮಂಗಲದಲ್ಲಿ ಗಣೇಶ ವಿಸರ್ಜನೆ ವೇಳೆ ನಡೆದಿರುವ ಘಟನೆಯನ್ನು ನಾನು ಉಗ್ರವಾಗಿ ಖಂಡಿಸುತ್ತೇನೆ. ಗಣಪತಿ ದೇವರ ಮೆರವಣಿಗೆಯಲ್ಲಿ ಶಾಂತಿಯುತವಾಗಿ ತೆರಳುತ್ತಿದ್ದ ಭಕ್ತರನ್ನು ಗುರಿ ಮಾಡಿ ಒಂದು ಸಮುದಾಯದ ಪುಂಡರು ಉದ್ದೇಶಪೂರ್ವಕವಾಗಿಯೇ ದಾಂಧಲೆ ಎಬ್ಬಿಸಿ ಸಾರ್ವಜನಿಕರು-ಪೊಲೀಸರ ಮೇಲೆ ಕಲ್ಲು, ಚಪ್ಪಲಿ ಎಸೆದು ಪೆಟ್ರೋಲ್ ಬಾಂಬ್ ಸ್ಫೋಟಿಸಿ ತಲ್ವಾರ್ ಝಳಪಿಸುವ ದುಸ್ಸಾಹಸಕ್ಕೆ ಕೈ ಹಾಕಿರುವುದು ಪಟ್ಟಣದಲ್ಲಿ ಶಾಂತಿ ಸುವ್ಯವಸ್ಥೆ ವೈಫಲ್ಯವಾಗಿರುವುದಕ್ಕೆ ಸಾಕ್ಷಿ ಎಂದು ದೂರಿದರು. ಇದನ್ನೂ ಓದಿ: ಪಿಎಸ್‍ಐ ಪರೀಕ್ಷೆ ಸೆ.28ಕ್ಕೆ ಮುಂದೂಡಿಕೆ: ಪರಮೇಶ್ವರ್ಪೊಲೀಸ್ ಠಾಣೆ ಎದುರು ರಕ್ಷಣೆ ಕೊಡಿ ಎಂದು ಶಾಂತಿಯುತವಾಗಿ ಪ್ರತಿಭಟಿಸುತ್ತಿದ್ದವರ ಮೇಲೆಯೇ ಆ ಕೋಮಿನ ಪುಂಡರು ದಬ್ಬಾಳಿಕೆ ನಡೆಸುತ್ತಾರೆ ಎಂದರೆ ನಾವು ಎಲ್ಲಿದ್ದೇವೆ ಎನ್ನುವ ಅನುಮಾನ ಬರುತ್ತದೆ. ಇಲ್ಲಿ ಸ್ಥಳೀಯ ಪೊಲೀಸರ ವೈಫಲ್ಯವೂ ಎದ್ದು ಕಾಣುತ್ತಿದೆ. ಕಾಂಗ್ರೆಸ್ (Congress) ಪಕ್ಷ ಮತ್ತು ರಾಜ್ಯ ಸರ್ಕಾರ ರಾಜಕೀಯ ಸ್ವಾರ್ಥಕ್ಕಾಗಿ ಒಂದು ನಿರ್ದಿಷ್ಟ ಸಮುದಾಯವನ್ನು ಅತಿಯಾಗಿ ಓಲೈಸಿ ತುಷ್ಟೀಕರಣ ಮಾಡಿದ ಫಲವಾಗಿ ನಾಗಮಂಗಲದಲ್ಲಿ ಈ ಹೇಯ ಘಟನೆ ನಡೆದಿದೆ ಎಂದು ಹೇಳಿದರು. ಇದನ್ನೂ ಓದಿ: Nagamangala Violence | ಆಕಸ್ಮಿಕವಾಗಿ ಕಲ್ಲು ತೂರಾಟ ನಡೆದಿದೆ: ಪರಮೇಶ್ವರ್‌ ಲಘು ಹೇಳಿಕೆಇಂತಹ ಓಲೈಕೆ,ತುಷ್ಟೀಕರಣ ರಾಜಕಾರಣ ನಿಲ್ಲಬೇಕು. ಇಲ್ಲದಿದ್ದರೆ ಕಾಂಗ್ರೆಸ್ ಪಕ್ಷಕ್ಕೆ ಕೆಟ್ಟ ದಿನಗಳು ದೂರವಿಲ್ಲ. ಸಾರ್ವಜನಿಕರು ಶಾಂತಿ ಕಾಪಾಡಬೇಕು ಎನ್ನುವುದು ನನ್ನ ಕಳಕಳಿಯ ಮನವಿ. ತಕ್ಷಣವೇ ಪಟ್ಟಣದಲ್ಲಿ ಶಾಂತಿ ಮರುಸ್ಥಾಪನೆ ನಿಟ್ಟಿನಲ್ಲಿ ಸರ್ಕಾರ ಕ್ರಮ ಕೈಗೊಳ್ಳಬೇಕು. ಅಲ್ಲದೆ ಈ ಪ್ರಕರಣ ನೆಪದಲ್ಲಿ ವಿರೋಧ ಪಕ್ಷಗಳ ಮುಖಂಡರು, ಕಾರ್ಯಕರ್ತರ ಮೇಲೆ ಪೊಲೀಸರು ದರ್ಪ ತೋರಿದರೆ ಸಹಿಸುವ ಪ್ರಶ್ನೆ ಇಲ್ಲ ಎಂದು ತಿಳಿಸಿದರು. ಇದನ್ನೂ ಓದಿ: Nagamangala Violence| ತಾಲಿಬಾನ್ ಮನಸ್ಥಿತಿಗೆ ಕಾಂಗ್ರೆಸ್ ಸರ್ಕಾರದಲ್ಲಿ ಪ್ರೋತ್ಸಾಹ – ಅಶೋಕ್‌ ಕಿಡಿ






 Advertisement 




Sign in to your account
Username or Email Address


Password

 Remember Me


