ರಾಜ್ಯದಲ್ಲಿ ಸೆಪ್ಟಂಬರ್ 13 ರವರೆಗೆ ಆರು ಜಿಲ್ಲೆಗಳಲ್ಲಿ ಭಾರೀ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದ ಕರಾವಳಿ ಹಾಗೂ ಮಲೆನಾಡು ಭಾಗದ ಜಿಲ್ಲೆಗಳ ಮೇಲೆ ಬಂಗಾಳಕೊಲ್ಲಿ ಹಾಗೂ ಅರಬ್ಬಿ ಸಮುದ್ರದಲ್ಲಿನ ಹವಾಮಾನ ವೈಪರಿತ್ಯಗಳ ಪ್ರಭಾವ ಮುಂದುವರಿದಿದ್ದು, ಪರಿಣಾಮ ಮುಂದಿನ ಮೂರು ದಿನಗಳ ಕಾಲ ವಿವಿಧ ಜಿಲ್ಲೆಗಳಲ್ಲಿ ಜೋರು ಗಾಳಿ ಸಹಿತ ಸಾಧಾರಣದಿಂದ ಭಾರೀ ಮಳೆ ಸಾಧ್ಯತೆ ಇದೆ.ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಹಾಗೂ ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಎರಡರಿಂದ ಮೂರು ದಿನ ಭಾರೀ ಮಳೆ ಆಗಲಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಮುಂಗಾರು ಆರಂಭವಾದಾಗಿನಿಂದ ಅಂದರೆ ಜೂನ್ ಅಂತ್ಯದಿಂದ ಈವರೆಗೆ ಈ ಎರಡು ಭಾಗಗಳಲ್ಲಿ ಹೆಚ್ಚಿನ ಮಳೆ ದಾಖಲಾಗಿದೆ.
ಒಳನಾಡು ಜಿಲ್ಲೆಗಳಾದ ಬಾಗಲಕೋಟೆ, ಧಾರವಾಡ, ವಿಜಯಪುರ, ಹಾವೇರಿ, ಕೊಪ್ಪಳ, ಗದಗ, ರಾಯಚೂರು, ಬೀದರ್, ಕಲಬುರಗಿ, ಯಾದಗಿರಿ ಜಿಲ್ಲೆಗಳ ವ್ಯಾಪ್ತಿಯಲ್ಲಿ ಅಷ್ಟಾಗಿ ಜೋರು ಮಳೆ ಪ್ರಭಾವ ಇಲ್ಲದಿದ್ದರೂ, ಆಗೊಮ್ಮೆ ಈಗೊಮ್ಮೆ ತುಂತುರು ಮಳೆಯ ಸಾಧ್ಯತೆ ಇದೆ.ಅದೇ ರೀತಿ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ, ಮಂಡ್ಯ, ಮೈಸೂರು, ರಾಮನಗರ, ಚಾಮರಾಜನಗರ, ಹಾಸನ, ತುಮಕೂರು, ಬಳ್ಳಾರಿ, ಚಿತ್ರದುರ್ಗ, ದಾವಣಗೆರೆ ಹಾಗೂ ವಿಜಯನಗರ ಜಿಲ್ಲೆಗಳ ವ್ಯಾಪ್ತಿಯಲ್ಲಿ ಲಘು ಮಳೆ, ಕೆಲವೊಮ್ಮೆ ವ್ಯಾಪಕ ಮಳೆ ಸಾಧ್ಯತೆ ಇದೆ.ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 30 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 19 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಮಡಿಕೇರಿಯಲ್ಲಿ ಗರಿಷ್ಠ ತಾಪಮಾನ 22 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 17 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.ನಗರಗಳ ಹವಾಮಾನ ವರದಿ:
ಬೆಂಗಳೂರು: 30-19
ಮಂಗಳೂರು: 28-25
ಶಿವಮೊಗ್ಗ: 28-21
ಬೆಳಗಾವಿ: 26-20
ಮೈಸೂರು: 29-21ಮಂಡ್ಯ: 31-21
ಮಡಿಕೇರಿ: 22-17
ರಾಮನಗರ: 32-21
ಹಾಸನ: 27-19
ಚಾಮರಾಜನಗರ: 31-20
ಚಿಕ್ಕಬಳ್ಳಾಪುರ: 29-19ಕೋಲಾರ: 31-20
ತುಮಕೂರು: 30-19
ಉಡುಪಿ: 28-24
ಕಾರವಾರ: 28-25
ಚಿಕ್ಕಮಗಳೂರು: 26-18
ದಾವಣಗೆರೆ: 29-21ಹುಬ್ಬಳ್ಳಿ: 28-21
ಚಿತ್ರದುರ್ಗ: 29-21
ಹಾವೇರಿ: 28-22
ಬಳ್ಳಾರಿ: 33-22
ಗದಗ: 29-21
ಕೊಪ್ಪಳ: 31-22ರಾಯಚೂರು: 33-22
ಯಾದಗಿರಿ: 32-23
ವಿಜಯಪುರ: 31-21
ಬೀದರ್: 29-21
ಕಲಬುರಗಿ: 31-22
ಬಾಗಲಕೋಟೆ: 31-22






 Advertisement 




Sign in to your account
Username or Email Address


Password

 Remember Me


