ಬೆಳಗಾವಿ: ಸಿದ್ದರಾಮಯ್ಯನವರೇ (CM Siddaramaiah) ಮುಖ್ಯಮಂತ್ರಿಯಾಗಿ ಮುಂದುವರಿಯುತ್ತಾರೆ. ಮುಖ್ಯಮಂತ್ರಿ ರೇಸ್‌ನಲ್ಲಿ ಯಾರೂ ಇಲ್ಲವೇ ಇಲ್ಲಾ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ (Dinesh Gundurao) ಹೇಳಿಕೆ ನೀಡಿದ್ದಾರೆ.ದೀಪಾವಳಿ ನಂತರ ಕಾಂಗ್ರೆಸ್ (Congress) ಸರ್ಕಾರ ಪತನ ಆಗುತ್ತೆ ಎಂಬ ಬಿಜೆಪಿ (BJP) ನಾಯಕರ ಹೇಳಿಕೆ ವಿಚಾರಕ್ಕೆ ಬೆಳಗಾವಿಯಲ್ಲಿ (Belagavi) ಪ್ರತಿಕ್ರಿಯಿಸಿದ ಅವರು, ಬಿಜೆಪಿಯವರಿಗೆ ಸ್ಥಿರ ಸರ್ಕಾರವನ್ನು ಸಹಿಸಿಕೊಳ್ಳಲು ಆಗುತ್ತಿಲ್ಲ. ಸರ್ಕಾರ ಅಸ್ಥಿರ ಮಾಡುವುದು, ಸರ್ಕಾರ ಬೀಳಿಸುವುದು, ಸರ್ಕಾರ ಒಡೆಯುವುದು, ಆಪರೇಷನ್ ಮಾಡುವ ಕೆಲಸವನ್ನು ಬಿಜೆಪಿಯವರು ಮಾಡುತ್ತಿದ್ದಾರೆ. ಕೇಂದ್ರ ಸರ್ಕಾರದವರಿಗೆ ಇದೇ ಕೆಲಸ ಆಗಿದೆ. ಸರ್ಕಾರ ಬೀಳಿಸುವುದೇ ಒಂದೇ ಅವರ ಕಾರ್ಯಕ್ರಮ ಆಗಿದೆ ಎಂದು ಕಿಡಿಕಾರಿದರು. ಇದನ್ನೂ ಓದಿ: Mysuru| ಕಲುಷಿತ ನೀರು ಸೇವನೆ ಶಂಕೆ- ಓರ್ವ ಸಾವು, 12 ಜನ ಅಸ್ವಸ್ಥನಾಳೆ ಸಿಎಂ ಭವಿಷ್ಯ ನಿರ್ಧಾರ ಆಗುತ್ತಾ ಎಂಬ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಅವರು, ಆಗುವುದಿಲ್ಲ. ಸಿಎಂ ಅವರ ಭವಿಷ್ಯವನ್ನು ನಿರ್ಧರಿಸುವ ಪ್ರಶ್ನೆಯಿಲ್ಲ. ಸಿದ್ದರಾಮಯ್ಯ ಅವರೇ ಸಿಎಂ ಆಗಿ ಇರುತ್ತಾರೆ. ಸಿಎಂ ರೇಸ್‌ನಲ್ಲಿ ಯಾರು ಇಲ್ಲ ಎಂದು ಸಮರ್ಥಿಸಿಕೊಂಡರು.  ಇದನ್ನೂ ಓದಿ: ರಾಯಚೂರು| ತರಗತಿಯಲ್ಲಿ ಲೋ ಬಿಪಿಯಿಂದ ಕುಸಿದು ಬಿದ್ದ ವಿದ್ಯಾರ್ಥಿ – ಹೃದಯಾಘಾತದಿಂದ ಸಾವುಬಿಜೆಪಿ ಸಾಮಾಜಿಕ ಜಾಲತಾಣದಲ್ಲಿ ಭ್ರಷ್ಟ ಸಿಎಂ, ಭ್ರಷ್ಟ ಸಿಎಂ ಆಕಾಂಕ್ಷಿಗಳು ಎಂದು ಪೋಸ್ಟ್ ಹಾಕಿರುವ ಕುರಿತು, ಅವರ ಸೋಷಿಯಲ್ ಮೀಡಿಯಾದಲ್ಲಿ ಏನೇನೂ ಹಾಕಿರುತ್ತಾರೆ. ಬಿಜೆಪಿಯವರು ಸುಳ್ಳು ಹೇಳುವುದರಲ್ಲಿ ದೇಶದಲ್ಲಿ ನಂಬರ್ ಒನ್ ಅಲ್ವಾ? ಸುಳ್ಳು ಸುದ್ದಿ ಪ್ರಚೋದನೆ ಮಾಡುವುದರಲ್ಲಿ ಬಿಜೆಪಿಯವರು ದೇಶದಲ್ಲಿ ನಂಬರ್ ಒನ್ ಎಂದು ತಿರುಗೇಟು ನೀಡಿದರು.  ಇದನ್ನೂ ಓದಿ: ಅತ್ಯಾಚಾರ ಕೇಸ್‌ – ಪ್ರಜ್ವಲ್‌ ರೇವಣ್ಣಗೆ ಸೀರೆ ಸಂಕಷ್ಟ!ಕೋರ್ಟಿನಲ್ಲಿ ಯಾವುದೇ ರೀತಿ ವ್ಯತಿರಿಕ್ತವಾದ ತೀರ್ಮಾನ ಬರುವುದಿಲ್ಲ. ಕೋರ್ಟ್ನಲ್ಲಿ ರಾಜ್ಯಪಾಲರು ತನಿಖೆಗೆ ಕೊಟ್ಟಿರುವುದು ಸರಿಯೋ ಇಲ್ಲವೋ ಅಷ್ಟೇ ಇರೋದು. ಅವರು ತಪ್ಪು ಮಾಡಿದ್ದಾರೆ ಎನ್ನುವುದು ಇಲ್ಲ. ನಮ್ಮ ಸಿಎಂ ಸಿದ್ದರಾಮಯ್ಯ ಯಾವುದೇ ತಪ್ಪು ಮಾಡಿಲ್ಲ. ಯಾವುದೇ ಅಧಿಕಾರದ ದುರುಪಯೋಗವು ಮಾಡಿಲ್ಲ ಎಂದು ಸಮಜಾಯಿಷಿ ನೀಡಿದರು.  ಇದನ್ನೂ ಓದಿ: ಇನ್‌ಸ್ಟಾದಲ್ಲಿ ತಲಾಕ್ ಕೊಟ್ಟಿದ್ದ ದುಬೈ ರಾಜಕುಮಾರಿಯಿಂದ `ಡಿವೋರ್ಸ್’ ಪರ್ಫ್ಯೂಮ್ ಬಿಡುಗಡೆರಾಜ್ಯಪಾಲರು ಕೇಂದ್ರ ಸರ್ಕಾರದ ಕೈಗೊಂಬೆಯಾಗಿದ್ದಾರೆ. ಕುಮಾರಸ್ವಾಮಿ, ಜೊಲ್ಲೆ, ನಿರಾಣಿ ಮೇಲೆ ಇರುವ ಭ್ರಷ್ಟಾಚಾರದ ಕುರಿತ ಅರ್ಜಿ ರಾಜ್ಯಪಾಲರ ಕಚೇರಿಯಲ್ಲಿ ತಿಂಗಳುಗಟ್ಟಲೇ ಹಾಗೇ ಬಿದ್ದಿದೆ. ರಾಜ್ಯಪಾಲರು ಇವರ ವಿರುದ್ಧ ಯಾವುದೇ ಕ್ರಮ ತೆಗೆದುಕೊಂಡಿಲ್ಲ. ಇವಾಗ ಸಿಎಂ ವಿರುದ್ಧ ಖಾಸಗಿ ದೂರು ಬಂದ ತಕ್ಷಣವೇ ನೋಟಿಸ್ ಕೊಟ್ಟಿದ್ದಾರೆ. ಇದರಲ್ಲಿ ರಾಜ್ಯಪಾಲರ ಮನಸ್ಥಿತಿ ಮತ್ತು ಪಕ್ಷಪಾತ ಮಾಡುತ್ತಿರುವುದು ಗೊತ್ತಾಗುತ್ತದೆ ಎಂದು ಹರಿಹಾಯ್ದರು.  ಇದನ್ನೂ ಓದಿ: ಗಣೇಶೋತ್ಸವದಲ್ಲಿ ಡ್ಯಾನ್ಸ್ ಮಾಡಿದ್ದು ಸಾಕು, ಮನೆಗೆ ಬಾ ಅಂದಿದ್ದಕ್ಕೆ ಯುವಕ ಆತ್ಮಹತ್ಯೆಸಿಎಂ ಸಿದ್ದರಾಮಯ್ಯ ಮೇಲೆ ಯಾವುದೇ ದೋಷ ಇಲ್ಲವೇ ಇಲ್ಲ. ರಾಜ್ಯಪಾಲರು ತನಿಖೆಗೆ ಕೊಟ್ಟಿರುವ ಅನುಮತಿ ಸರಿಯೋ ತಪ್ಪೋ ಅನ್ನೋದು ಅಷ್ಟೇ ಕೋರ್ಟ್ ಮುಂದೆ ಇರೋದು. ಕೋರ್ಟ್ನಲ್ಲಿ ಸಿಎಂ ತಪ್ಪು ಮಾಡಿದ್ದಾರೆ ಅನ್ನೋದು ಇಲ್ಲವೇ ಇಲ್ಲ ಎಂದು ಪುನರುಚ್ಛರಿಸಿದರು.ಇಂದು ಖಾನಾಪುರದಲ್ಲಿ ತಾಯಿ ಮತ್ತು ಮಕ್ಕಳ ಆಸ್ಪತ್ರೆ ಉದ್ಘಾಟಿಸುತ್ತಿದ್ದೇನೆ. ಗೋಕಾಕ್‌ನಲ್ಲಿ ಆಸ್ಪತ್ರೆ ಕಾಮಗಾರಿ ಪರಿಶೀಲಿಸಲಿದ್ದೇನೆ. ಆರೋಗ್ಯ ಇಲಾಖೆಯಲ್ಲಿ ವೈದ್ಯರ ಕೊರತೆಯಿದೆ. ವೈದ್ಯರ ಕೊರತೆ ನಿವಾರಿಸಲು ಪ್ರಯತ್ನಿಸುತ್ತಿದ್ದೇನೆ. ತಜ್ಞ ವೈದ್ಯರನ್ನು ಗುತ್ತಿಗೆ ಆಧಾರದ ಮೇಲೆ ಭರ್ತಿ ಮಾಡುತ್ತಿದ್ದೇವೆ. ನಿರೀಕ್ಷಿತ ಪ್ರಮಾಣದಲ್ಲಿ ತಜ್ಞ ವೈದ್ಯರು ಬರುತ್ತಿಲ್ಲ. ನಕಲಿ ವೈದರು ಎಲ್ಲಾ ಕಡೆಯಿದ್ದಾರೆ. ನಕಲಿ ವೈದ್ಯರ ವಿರುದ್ಧ ಕಾನೂನು ರೀತಿ ಮುಲಾಜಿಲ್ಲದೇ ಕ್ರಮ ಜರುಗಿಸಲು ಹೇಳಿದ್ದೇನೆ. ನಕಲಿ ವೈದ್ಯರ ವಿರುದ್ಧ ಕಾನೂನು ಕ್ರಮ ಆಗಲಿದೆ ಎಂದು ಸ್ಪಷ್ಟಪಡಿಸಿದರು.  ಇದನ್ನೂ ಓದಿ: ಅಮೃತ್ ಯೋಜನೆ ಉಲ್ಲೇಖಿಸಿ ರಾಜಮನೆತನಕ್ಕೆ ಟಾಂಗ್‌ ನೀಡಿ ಚಾಮುಂಡಿ ಬೆಟ್ಟ ಪ್ರಾಧಿಕಾರ ಪರ ಪ್ರತಾಪ್ ಸಿಂಹ ಬ್ಯಾಟಿಂಗ್‌






 Advertisement 




Sign in to your account
Username or Email Address


Password

 Remember Me


