ಮಂಡ್ಯ: ನಾವು ಯಾವ ಊರಿಗೆ ಹೋದರೂ ಸಹ ಜನರು ರಸ್ತೆ ಸೇರಿದಂತೆ ಇತರೆ ಅಭಿವೃದ್ಧಿ ಕೆಲಸಗಳನ್ನು ಮಾಡಿಲ್ಲ ಎಂದು ಹೇಳುತ್ತಿದ್ದಾರೆ. ಆದರೆ ರಾಜ್ಯ ಸರ್ಕಾರ ನೀಡುತ್ತಿರುವ ಗ್ಯಾರಂಟಿ ಯೋಜನೆಗಳಿಂದ (Guarantee Scheme) ಇತರೆ ಅಭಿವೃದ್ಧಿ ಕೆಲಸಗಳಿಗೆ ಅನುದಾನಗಳು ಬರುತ್ತಿಲ್ಲ. ಹೀಗಾಗಿ ಸರ್ಕಾರ ಗ್ಯಾರಂಟಿ ಯೋಜನೆಗಳ ಬಗ್ಗೆ ಪರಾಮರ್ಶೆ ಮಾಡಿ ಅಭಿವೃದ್ಧಿ ಯೋಜನೆಗಳಿಗೂ ಹಣ ನೀಡಬೇಕಾದ ಅನಿವಾರ್ಯತೆ ಎದುರಾಗಿದೆ ಎಂದು ಮಂಡ್ಯ (Mandya) ಜಿಲ್ಲೆಯ ಮೇಲುಕೋಟೆ (Melukote)  ಕ್ಷೇತ್ರದ ಶಾಸಕ ದರ್ಶನ್ ಪುಟ್ಟಣ್ಣಯ್ಯ (Dharshan Puttannaiah) ಹೇಳಿದ್ದಾರೆ.ಈ ಕುರಿತು ಮಂಡ್ಯದಲ್ಲಿ ಮಾತನಾಡಿದ ಅವರು, ನಾವು ಹೋದ ಕಡೆಯಲ್ಲಿ ಎಲ್ಲಾ ಜನರು ನಮಗೆ ಗ್ಯಾರಂಟಿ ಯೋಜನೆಗಳ ಜೊತೆಗೆ ಅಭಿವೃದ್ಧಿ ಕೆಲಸಗಳು ಬೇಕು ಎಂದು ಹೇಳುತ್ತಿದ್ದಾರೆ. ಮೂರು ಹೊತ್ತು ಊಟ ಮಾಡುವುದರ ಜೊತೆಗೆ ಜನರಿಗೆ ಮೂಲಭೂತ ಸೌಕರ್ಯಗಳನ್ನು ನೀಡುವುದು ಸಹ ಅನಿವಾರ್ಯವಾಗಿದೆ ಎಂದರು. ಇದನ್ನೂ ಓದಿ: ಬೆಂಗಳೂರಿನಲ್ಲಿ ರಸ್ತೆಗಿಳಿಯಲ್ಲ ಡಬ್ಬಲ್ ಡೆಕ್ಕರ್ ಬಸ್ – ಯೋಜನೆ ಕೈಬಿಟ್ಟ ಬಿಎಂಟಿಸಿರಾಜ್ಯ ಸರ್ಕಾರ ಗ್ಯಾರಂಟಿ ಯೋಜನೆಗಳ ಬಗ್ಗೆ ಪರಾಮರ್ಶೆ ಮಾಡಬೇಕಾಗಿದೆ. ಜನರು ಗೆದ್ದು ಒಂದೂವರೆ ವರ್ಷವಾಗಿದೆ ಏನು ಕೆಲಸ ಮಾಡಿದ್ದೀರಾ ಎಂದು ಕೇಳುತ್ತಿದ್ದಾರೆ. ಜನರ ಅಭಿವೃದ್ಧಿಗೆ ಹಲವು ಇಲಾಖೆಗಳಿಂದ ಅನುದಾನಗಳು ಸಿಗುತ್ತಿಲ್ಲ. ಹೀಗಾಗಿ ಅಭಿವೃದ್ಧಿಗೆ ಹಣ ಅವಶ್ಯಕತೆ ಇದೆ. ಸದ್ಯ ರಾಜ್ಯದ ಎಲ್ಲಾ ಆದಾಯದ ಮೂಲ ಗ್ಯಾರಂಟಿ ಯೋಜನೆಗಳಿವೆ ಹೋಗುತ್ತಿದೆ. ಹೀಗಾಗಿ ಸಮತೋಲನವಾಗಿ ಗ್ಯಾರಂಟಿ ಯೋಜನೆಗಳ ಜೊತೆಗೆ ಅಭಿವೃದ್ಧಿ ಕೆಲಸಕ್ಕೆ ಅನುದಾನ ನೀಡಬೇಕೆಂದು ಆಗ್ರಹಿಸಿದ್ದಾರೆ. ಇದನ್ನೂ ಓದಿ: ನನಗೆ ಈ ಟಿವಿ ಬೇಡ, ತೆಗೆದುಕೊಂಡು ಹೋಗಿ: ದರ್ಶನ್‌


 Advertisement 







 Advertisement 




Sign in to your account
Username or Email Address


Password

 Remember Me


