ಕೊನೆಗೂ ಮೋಹಕ ತಾರೆ ರಮ್ಯಾ (Ramya) ಮದುವೆ (Wedding) ವಿಚಾರದ ಬಗ್ಗೆ ಸ್ಪಷ್ಟನೆ ಕೊಟ್ಟಿದ್ದಾರೆ. ಹಲವಾರು ಬಾರಿ ರಮ್ಯಾ ಮದುವೆ ವಿಚಾರ ಹಾಟ್ ಟಾಪಿಕ್ ಕೂಡ ಆಗಿತ್ತು. ಸ್ಯಾಂಡಲ್‌ವುಡ್ ಕ್ವೀನ್ ರಮ್ಯಾ ಯಾವುದೇ ಕಾರ್ಯಕ್ರಮಕ್ಕೆ ಹೋಗಲಿ ಅಲ್ಲಿ ಮದುವೆ ವಿಷಯ ಪ್ರಸ್ತಾಪ ಆಗಿಯೇ ಆಗುತ್ತಿತ್ತು. ಈ ವೀಕೆಂಡ್ ನಲ್ಲೂ ರಮ್ಯಾ ಮದುವೆ ವಿಷ್ಯ ಬ್ರೇಕಿಂಗ್ ಆಗಿತ್ತು.ಟೆಕ್ಸ್‌ಟೈಲ್ ಉದ್ಯಮಿ (Businessman) ಜೊತೆ ರಮ್ಯಾ ನಿಶ್ಚಿತಾರ್ಥ ಆಗಿದೆ ಅನ್ನೋ ವಿಚಾರ ಗಾಂಧಿನಗರದ ಗಲ್ಲಿಗಲ್ಲಿಗಳಲ್ಲಿ ಕೇಳಿ ಬಂದಿತ್ತು. ಆಪ್ತರು ಹೇಳುವಂತೆ ಅಕ್ಟೋಬರ್ ನಲ್ಲಿ ಎಂಗೇಜ್‌ಮೆಂಟ್ ಆಗಲಿದ್ದಾರಂತೆ. ನವೆಂಬರ್‌ನಲ್ಲಿ ಬೆಂಗಳೂರಿನ ಅರಮನೆಯಲ್ಲಿ ಮದುವೆ ನಡೆಯಲಿದೆ ಎಂದು ಹೇಲಾಗಿತ್ತು. ಆದ್ರೆ ನಟಿ ಪೋಸ್ಟ್‌ವೊಂದನ್ನು ಹಂಚಿಕೊಳ್ಳುವ ಮೂಲಕ ಮದುವೆ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ. ದಯವಿಟ್ಟು ವದಂತಿ ಮತ್ತು ಸುಳ್ಳು ಸುದ್ದಿಗಳನ್ನ ಹಾಕಬೇಡಿ. ಮುಂದೆ ನಾನು ಮದುವೆ ಆಗೋವಾಗ ನಿಮಗೆ ಹೇಳುತ್ತೀನಿ ಎಂದು ಸೋಷಿಯಲ್‌ ಮೀಡಿಯಾದಲ್ಲಿ ಪೋಸ್ಟ್‌ವೊಂದನ್ನ ಹಂಚಿಕೊಂಡಿದ್ದಾರೆ.ಈ ವಿಚಾರಕ್ಕೆ ಸಂಬಂಧಿಸಿದ ವೀಡಿಯೋ ಇಲ್ಲಿದೆ..Sign in to your account
Username or Email Address


Password

 Remember Me


