ಚಿತ್ರದುರ್ಗ: ಅಧಿಕಾರ ಇದ್ದಾಗ ಬಿಜೆಪಿಯವರು ಸಾಧನೆ ಮಾಡಲಿಲ್ಲ. ಅಧಿಕಾರ ಇದ್ದಾಗ ಶ್ರೀರಾಮುಲು ಏನು ಮಾಡಲಿಲ್ಲ, ಶಾಸಕ ಎನ್.ವೈ.ಗೋಪಾಲಕೃಷ್ಣ ಏನು ಮಾಡಲಿಲ್ಲ ಎಂದು ಇಂಧನ ಸಚಿವ ಡಿ.ಕೆ.ಶಿವಕುಮಾರ್ ಬಿಜೆಪಿ ವಿರುದ್ಧ ಹರಿಹಾಯ್ದಿದ್ದಾರೆ.ಮೊಳಕಾಲ್ಮೂರು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಾ.ಯೊಗೀಶ್ ಬಾಬು ಪರ ನಡೆದ ಪ್ರಚಾರ ಸಭೆಯಲ್ಲಿ ಮಾತನಾಡುವ ವೇಳೆ ಬಿಜೆಪಿ ವಿರುದ್ಧ ಡಿಕೆಶಿ ಗುಡುಗಿದ್ದು, ಬಿಜೆಪಿ ಅಧಿಕಾರದಲ್ಲಿದ್ದಾಗ ಶ್ರೀರಾಮುಲು ಅವರಿಗೆ ಏನು ಮಾಡಲು ಆಗಲಿಲ್ಲ ಎಂದು ಮೊಳಕಾಲ್ಮೂರು ಬಿಜೆಪಿ ಅಭ್ಯರ್ಥಿ ರಾಮುಲು ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.ಶಾಸಕ ಎನ್.ವೈ.ಗೋಪಾಲಕೃಷ್ಣ ಕೂಡ ಅಧಿಕಾರ ಸಿಕ್ಕಾಗ ಏನು ಮಾಡಲಿಲ್ಲ. ಇನ್ನು ಅಧಿಕಾರ ಇಲ್ಲದ ವೇಳೆ ಅಲ್ಲೋಗಿ ಹರಿತೀನಿ, ಹರಿತೀನಿ ಅಂತಿದ್ದಾರೆ. `ಕೊಟ್ಟ ಕುದುರೆಯನೇರಲು ಅರಿಯದವರು ಮತ್ತೊಂದು ಕುದುರೆಯನ್ನೇರಲು ಬಯಸುವವನು ವೀರನೂ ಅಲ್ಲ, ಶೂರನು ಅಲ್ಲ’ ಎನ್ನುವ ವಚನವನ್ನು ಉಲ್ಲೇಖಿಸಿ ಮಾತನಾಡಿದ್ದಾರೆ.ಬಿ.ಎಸ್.ಯಡಿಯೂರಪ್ಪ ಮುಖ್ಯಮಂತ್ರಿ ಅಂತೆ ಬಿಎಸ್‍ವೈ ಗೆ ತಮ್ಮ ಮಗನಿಗೆ ಟಿಕೆಟ್ ಕೊಡಿಸಲು ಸಾಧ್ಯವಾಗಿಲ್ಲ ಅಂತ ವ್ಯಂಗ್ಯವಾಡಿದ್ರು.


 Advertisement 







 Advertisement 




Sign in to your account
Username or Email Address


Password

 Remember Me


