ಧಾರವಾಡ: ಬೈಕ್‍ಗೆ ಬೊಲೆರೋ ವಾಹನ ಡಿಕ್ಕಿಯಾದ ಪರಿಣಾಮ ಬೈಕ್ ಸವಾರ ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ಜಿಲ್ಲೆಯ ತಾರಿಹಾಳ ಬೈಪಾಸ್‍ನಲ್ಲಿ ನಡೆದಿದೆ.ರಾಷ್ಟ್ರಿಯ ಹೆದ್ದಾರಿ 4 ರಲ್ಲಿ ಈ ಅಪಘಾತ ಸಂಭವಿಸಿದೆ. ತಾರಿಹಾಳ ಬೈಪಾಸ್ ನಲ್ಲಿ ವೇಗವಾಗಿ ಬಂದ ಬೊಲೆರೋ ಬೈಕ್ ಗೆ ಡಿಕ್ಕಿ ಹೊಡೆದಿದೆ. ಬೊಲೆರೋ ವಾಹನ ಡಿಕ್ಕಿ ಹೊಡೆದ ರಭಸಕ್ಕೆ ಬೈಕ್ ಸವಾರ ಕೆಳಗೆ ಬಿದ್ದಿದ್ದಾರೆ.ಸವಾರ ಕೆಳಗೆ ಬೀಳುತ್ತಿದ್ದಂತೆಯೇ ಎದುರುನಿಂದ ವೇಗವಾಗಿ ಬರುತ್ತಿದ್ದ ವಾಹನವೊಂದು ಅವರ ಮೇಲೆ ಹರಿದಿದೆ. ಪರಿಣಾಮ ಸವಾರನ ದೇಹ ಛಿದ್ರ ಛಿದ್ರವಾಗಿದ್ದು, ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ ಎನ್ನಲಾಗಿದೆ.ಮೃತ ಬೈಕ್ ಸವಾರನ ಗುರುತು ಪತ್ತೆಯಾಗಿಲ್ಲ. ಈ ಘಟನೆ ಧಾರವಾಡ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.


 Advertisement 







 Advertisement 




Sign in to your account
Username or Email Address


Password

 Remember Me


