ಬೆಂಗಳೂರು: ವರುಣಾ ಕ್ಷೇತ್ರದಲ್ಲಿ ವಿಜಯೇಂದ್ರ ಅವರಿಗೆ ಟಿಕೆಟ್ ಕೈ ತಪ್ಪಿದ ವಿಚಾರಕ್ಕೆ ನನ್ನ ಹೆಸರನ್ನು ಯಾಕೆ ಥಳಕು ಹಾಕ್ತೀರಾ? ಊಹಾತ್ಮಕವಾಗಿ ಯಾರೋ ಬಾಯಿಗೆ ಬಂದ ಹಾಗೆ ಮಾತನಾಡಿದ್ರೆ ಅದಕ್ಕೆ ನಾನು ಏನು ಮಾಡಲಿ ಎಂದು ಕೇಂದ್ರ ಸಚಿವ ಅನಂತ್ ಕುಮಾರ್ ಪ್ರಶ್ನಿಸಿದ್ದಾರೆ.ಬಿಎಸ್‍ವೈ ಪುತ್ರ ವಿಜಯೇಂದ್ರ ಅವರಿಗೆ ಟಿಕೆಟ್ ತಪ್ಪಲು ಅನಂತ್ ಕುಮಾರ್ ಕಾರಣ ಎನ್ನುವ ಆರೋಪಕ್ಕೆ ಪ್ರತಿಕ್ರಿಯಿಸಿದ ಅವರು, ವರುಣಾ ಕ್ಷೇತ್ರಕ್ಕೆ ಅಧಿಕೃತವಾಗಿ ಇಲ್ಲಿಯವರೆಗೆ ಟಿಕೆಟ್ ಘೋಷಣೆಯಾಗಿಲ್ಲ ಉಹಾ ಪೋಹಗಳನ್ನು, ಕಲ್ಪನೆಗಳನ್ನು ಕಟ್ಟಿಕೊಳ್ಳಬಾರದು ಎಂದು ತಿಳಿಸಿದರು.ಈ ವೇಳೆ ಆ ಕ್ಷೇತ್ರದ ಅಭ್ಯರ್ಥಿ ಯಾರಾಗುತ್ತಾರೆ ಎಂದು ಮಾಧ್ಯಮಗಳು ಪ್ರಶ್ನಿಸಿದ್ದಕ್ಕೆ, ಅಭ್ಯರ್ಥಿ ಯಾರಾಗಬಹುದು ಎನ್ನುವುದನ್ನು ಕಾದುನೋಡಿ ಎಂದು ತಿಳಿಸಿದರು.Sign in to your account
Username or Email Address


Password

 Remember Me


