ಮೈಸೂರು: ಪಕ್ಷದ ನಿರ್ಧಾರಕ್ಕೆ ನಾವೆಲ್ಲ ಬದ್ಧರಾಗಿರೋಣ. ಕಾರ್ಯಕರ್ತರು ಶಾಂತ ರೀತಿಯಲ್ಲಿ ಸಹಕರಿಸಬೇಕು ಎಂದು ಬಿಎಸ್ ಯಡಿಯೂರಪ್ಪ ಪುತ್ರ ವಿಜಯೇಂದ್ರ ಮನವಿ ಮಾಡಿದ್ದಾರೆ.ಫೇಸ್‍ಬುಕ್ ನಲ್ಲಿ ಸ್ಟೇಟಸ್ ಅಪ್‍ಡೇಟ್ ಮಾಡಿಕೊಂಡಿರುವ ಅವರು, ರಾಜ್ಯದ ಅಭಿವೃದ್ಧಿಗಾಗಿ ಬಿ.ಎಸ್.ಯಡಿಯೂರಪ್ಪನವರ ನೇತೃತ್ವದ ಬಿಜೆಪಿ ಸರಕಾರ ಅಧಿಕಾರಕ್ಕೆ ಬರಬೇಕಿದೆ ಎಂದು ಬರೆದುಕೊಂಡಿದ್ದಾರೆ.ಬಿಜೆಪಿ ಯನ್ನು ಅಧಿಕಾರಕ್ಕೆ ತರುವುದೇ ನಮ್ಮೆಲ್ಲರ ಗುರಿಯಾಗಿದ್ದು, ಅದಕ್ಕಾಗಿ ಒಗ್ಗಟ್ಟಿನಿಂದ ಶ್ರಮಿಸೋಣ ಎಂದು ಹೇಳಿಕೊಂಡಿದ್ದಾರೆ.ಬಿಜೆಪಿಯ 4ನೇ ಪಟ್ಟಿ ಇಂದು ಬಿಡುಗಡೆ ಆಗಿದ್ದು, ಈ ಪಟ್ಟಿಯಲ್ಲೂ ವರುಣಾ ಮತ್ತು ಬಾದಾಮಿ ಟಿಕೆಟ್ ಘೋಷಣೆಯಾಗಿಲ್ಲ. ವರುಣಾ ಟಿಕೆಟ್ ಆಕಾಂಕ್ಷಿಯಾಗಿದ್ದ ವಿಜಯೇಂದ್ರ ಅಲ್ಲೇ ಒಂದು ಮನೆ ಬಾಡಿಗೆ ಪಡೆದು ಗೃಹಪ್ರವೇಶ ಮಾಡಿದ್ದರು.ಇಂದು ಮಧ್ಯಾಹ್ನ ನಂತರ ನಡೆದ ನಾಟಕೀಯ ಬೆಳವಣಿಗೆಯಲ್ಲಿ ವರುಣಾ ಕ್ಷೇತ್ರದಲ್ಲಿ ನಡೆದ ಸಮಾವೇಶದಲ್ಲಿ, ಪುತ್ರ ವಿಜಯೇಂದ್ರ ಈ ಕ್ಷೇತ್ರದಲ್ಲಿ ಸ್ಪರ್ಧಿಸುವುದಿಲ್ಲ ಎಂದು ಬಿಎಸ್‍ವೈ ಹೇಳಿದ್ದರು. ಇದನ್ನೂ ಓದಿ: ಕೊನೆ ಘಳಿಗೆಯಲ್ಲಿ ಬಿಎಸ್‍ವೈಗೆ ಕರೆ ಮಾಡಿದ ಆ ನಾಯಕ ಯಾರು?Sign in to your account
Username or Email Address


Password

 Remember Me


