ಮೈಸೂರು: ರಾಜ್ಯ ವಿಧಾನಸಭಾ ಚುನಾವಣೆಗೆ ಅಭ್ಯರ್ಥಿಗಳನ್ನು ಅಳೆದು ತೂಗಿ ಆಯ್ಕೆ ಮಾಡಿದ್ದ ಬಿಜೆಪಿ ನಾಯಕರಿಗೆ ವರುಣಾ ಕ್ಷೇತ್ರದ ಮಾತ್ರ ತಲೆನೋವಾಗಿ ಕಾರ್ಯಕರ್ತರು ಮತ್ತೆ ಪ್ರತಿಭಟನೆ ನಡೆಸಿದ್ದಾರೆ.ವರಣಾ ಕ್ಷೇತ್ರದ ಹಲವು ಕಾರ್ಯಕರ್ತರು ವಿಜಯೇಂದ್ರ ಅವರಿಗೆ ಟಿಕೆಟ್ ನೀಡುವಂತೆ ಆಗ್ರಹಿಸಿ ನಗರದ ಪ್ರೆಸಿಡೆಂಟ್ ಹೋಟೆಲ್ ಮುಂದೇ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.ಬಿಎಸ್ ಯಡಿಯೂರಪ್ಪ ಅವರು ಸದ್ಯ ಪ್ರೆಸಿಡೆಂಟ್ ಹೋಟೆಲ್ ನಲ್ಲಿ ವಾಸ್ತವ್ಯ ಹೂಡಿರುವ ಕಾರಣ ಪ್ರತಿಭಟನೆ ಬಿಸಿ ಹೆಚ್ಚಾಗಿದೆ. ಪರಿಸ್ಥಿತಿಯನ್ನು ಹತೋಟಿಗೆ ತರಲು ಯತ್ನಿಸಿದ ಪೊಲೀಸರು ಕಾರ್ಯಕರ್ತರ ಮೇಲೆ ಲಾಠಿ ಚಾರ್ಜ್ ನಡೆಸಿ ಪರಿಸ್ಥಿತಿಯನ್ನು ತಿಳಿಗೊಳಿಸಿದ್ದಾರೆ. ಈ ನಡುವೆ ಬಿಎಸ್‍ವೈ ರನ್ನು ಭೇಟಿ ಮಾಡಲು ಬಂದ ಮಾಜಿ ಸಚಿವ, ಕೃಷ್ಣರಾಜ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ರಾಮ್ ದಾಸ್ ಅವರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿ ಹೋಟೆಲ್ ಪ್ರವೇಶ ಮಾಡದಂತೆ ತಡೆದ ಘಟನೆಯೂ ನಡೆಯಿತು. ಇದನ್ನೂ ಓದಿ: ವಿಜಯೇಂದ್ರನಿಗೆ ಸ್ಪರ್ಧೆಯಿಂದ ನಿರ್ಗಮಿಸುವಂತೆ ಹೇಳಿದ್ದು ನಾನೇ: ಬಿಎಸ್‍ವೈಹೋಟೆಲ್ ನಲ್ಲಿ ಮಾಜಿ ಡಿಸಿಎಂ ಆರ್ ಆಶೋಕ್, ಸಂಸದ ಪ್ರತಾಪ್ ಸಿಂಹ, ರೇವಣಾ ಸಿದ್ದಯ್ಯ ಸೇರಿದಂತೆ ಹಲವು ನಾಯಕರು ಬಿಎಸ್‍ವೈ ಅವರನ್ನು ಭೇಟಿ ಮಾಡಿದ್ದಾರೆ. ಇದನ್ನೂ ಓದಿ: ಕೊನೆ ಘಳಿಗೆಯಲ್ಲಿ ಬಿಎಸ್‍ವೈಗೆ ಕರೆ ಮಾಡಿದ ಆ ನಾಯಕ ಯಾರು?Sign in to your account
Username or Email Address


Password

 Remember Me


