ಮೈಸೂರು: ಚುನಾವಣಾ ಪ್ರಚಾರದ ಭರದಲ್ಲಿ ಮಾಜಿ ಸಿಎಂ ಪುತ್ರ ವಿಜಯೇಂದ್ರ ಸಂಚಾರಿ ನಿಯಮವನ್ನು ಉಲ್ಲಂಘಿಸಿದ್ದಾರೆ.ವರುಣಾ ವಿಧಾನಸಭಾ ಕ್ಷೇತ್ರದ ಹಿರಿಯೂರು ಗ್ರಾಮದಲ್ಲಿ ಹೆಲ್ಮೆಟ್ ಇಲ್ಲದೇ ಬೈಕ್ ನಲ್ಲಿ ಪ್ರಚಾರ ನಡೆಸಿದ್ರು. ಬೈಕ್ ಸವಾರ ಹಾಗೂ ಹಿಂಬದಿ ಸವಾರ ಖಡ್ಡಾಯವಾಗಿ ಹೆಲ್ಮೆಟ್ ಧರಿಸಬೇಕೆಂಬ ನಿಯಮವಿದೆ. ಆದ್ರೂ ನಿಯಮವನ್ನ ಗಾಳಿಗೆ ತೂರಿದ ವಿಜಯೇಂದ್ರ ಬೈಕ್ ನ ಹಿಂಬದಿಯಲ್ಲಿ ಕುಳಿತು ಸಾಗಿದರು.ಬಿಜೆಪಿ ಮೂರನೇ ಪಟ್ಟಿಯಲ್ಲೂ ವಿಜಯೇಂದ್ರ ಅವರ ಹೆಸರು ಘೋಷಣೆ ಆಗಿಲ್ಲ. ಆದ್ರೂ ಬಿ.ವೈ ವಿಜಯೇಂದ್ರ ನಾಮಪತ್ರ ಸಲ್ಲಿಕೆಗೆ ಮುಹೂರ್ತ ನಿಗದಿ ಮಾಡಲಾಗಿದೆ. ಇಂದು ವರುಣಾ ಕ್ಷೇತ್ರದಿಂದ ನಾಮಪತ್ರ ಸಲ್ಲಿಸಲಿದ್ದಾರೆ ಅಂತಾ ಬಿಜೆಪಿ ಮೂಲಗಳು ತಿಳಿಸಿವೆ. ನಾಮಪತ್ರ ಸಲ್ಲಿಕೆ ವೇಳೆ ವಿಜಯೇಂದ್ರ ಅವರಿಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ, ಸಂಸದ ಶ್ರೀ ರಾಮುಲು, ಮಾಜಿ ಸಚಿವರುಗಳಾದ ವಿ.ಶ್ರೀನಿವಾಸ್ ಪ್ರಸಾದ್, ಗೋವಿಂದ್ ಕಾರಜೋಳ, ಶಿಕಾರಿಪುರದ ಶಾಸಕ ಬಿ.ವೈ. ರಾಘವೇಂದ್ರ, ನಿವೃತ್ತ ಪೊಲೀಸ್ ಅಧಿಕಾರಿ ಎಲ್. ರೇವಣ್ಣ ಸಿದ್ದಯ್ಯ, ಹಿಂದುಳಿದ ಮೋರ್ಚ ರಾಜ್ಯಾಧ್ಯಕ್ಷ ಬಿ.ಜೆ. ಪುಟ್ಟಸ್ವಾಮಿ ಸೇರಿದಂತೆ ಹಲವು ಮುಖಂಡರು ಸಾಥ್ ನೀಡಲಿದ್ದಾರೆ.Sign in to your account
Username or Email Address


Password

 Remember Me


