ಬೆಳಗಾವಿ: ಭೀಕರ ರಸ್ತೆ ಅಪಘಾತದಲ್ಲಿ ಸಿಲುಕಿಕೊಂಡಿದ್ದ ಇಬ್ಬರನ್ನು ಸ್ಥಳೀಯರು ರಕ್ಷಣೆ ಮಾಡಿರುವ ಘಟನೆ ಬೆಳಗಾವಿ ಜಿಲ್ಲೆ ಚಿಕ್ಕೋಡಿ ಪಟ್ಟಣದಲ್ಲಿ ನಡೆದಿದೆ.ಚಿಕ್ಕೋಡಿ ಪಟ್ಟಣದ ಹುಕ್ಕೇರಿ ಕ್ರಾಸ್ ಬಳಿ ಸ್ವಿಫ್ಟ್ ಕಾರಿಗೆ ಹಿಂಬದಿಯಿಂದ ಕಲ್ಲು ತುಂಬಿದ್ದ ಟಿಪ್ಪರ್ ಗುದ್ದಿದ ಪರಿಣಾಮ ಸ್ವಿಫ್ಟ್ ಕಾರು ನಜ್ಜುಗುಜ್ಜಾಗಿದೆ. ಕಾರ್ ನುಜ್ಜಾಗುಜ್ಜಾಗಿದ್ದರಿಂದ ಒಳಗಡೆ ಯಕ್ಸಾಂಬಾ ಪಟ್ಟಣದ ಜಗದೀಶ್ ಸರಿಕರ್ ಮತ್ತು ಅಥಣಿಯ ಹೊನಕಪ್ಪ ಎಂಬವರು ಸಿಲುಕಿಕೊಂಡಿದ್ದರು.ಕಾರಿನೊಳಗೆ ಸಿಲುಕಿ ಸಾವು-ಬದುಕಿನ ಮಧ್ಯೆ ಹೋರಾಡುತ್ತಿದ್ದ ಇಬ್ಬರನ್ನು ಸ್ಥಳೀಯರು ರಕ್ಷಣೆ ಮಾಡಿದ್ದಾರೆ. ಅಪಘಾತ ನಡೆದ ಸ್ಥಳಕ್ಕೆ ಚಿಕ್ಕೋಡಿ ಟ್ರಾಫಿಕ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.Sign in to your account
Username or Email Address


Password

 Remember Me


