ಬೆಂಗಳೂರು: ಶತಾಗತಯ ಕರ್ನಾಟಕದಲ್ಲಿ ಕಮಲ ಬಾವುಟ ಹಾರಿಸಲು ಪಣತೊಟ್ಟಿರುವ ಬಿಜೆಪಿ ವಾರ್ ಡೇಸ್ ಘೋಷಣೆ ಮಾಡಲಾಗಿದೆ. ಮೇ 1ರಿಂದ 9ರವರೆಗಿನ ಒಂಬತ್ತು ದಿನಗಳನ್ನು ‘ನವದಿನ ಯುದ್ಧ’ವಾಗಿ ಬಿಜೆಪಿ ಹೈಕಮಾಂಡ್ ಘೋಷಣೆ ಮಾಡಿದೆ.ಈ ಒಂಬತ್ತು ದಿನಗಳಂದು ಕೇಂದ್ರ ನಾಯಕರು ರಾಜ್ಯದಲ್ಲಿ ಠಿಕಾಣಿ ಹೂಡಲಿದ್ದಾರೆ. ಇತ್ತ ಬಿಜೆಪಿ ಅಧಿಕಾರದಲಿರುವ ನಾಲ್ಕು ರಾಜ್ಯಗಳ ಸಿಎಂಗಳು ಕೂಡ ಪ್ರಚಾರದಲ್ಲಿ ಭಾಗಿಯಾಗಲಿದ್ದಾರೆ. ಅಮಿತ್ ಶಾ, ಯೋಗಿ ಆದಿತ್ಯನಾಥ್ ಸೇರಿದಂತೆ ಹಲವು ನಾಯಕರು ಚುನಾವಣಾ ಪ್ರಚಾರಕ್ಕಾಗಿ ಕರ್ನಾಟಕದಲ್ಲಿಯೇ ಉಳಿದುಕೊಳ್ಳಲಿದ್ದಾರೆ.ಮೇ 1 ರಂದು ರಾಜ್ಯಕ್ಕೆ ಪ್ರಧಾನಿ ಮೋದಿ ಆಗಮಿಸಲಿದ್ದು, 5 ದಿನ ವಿವಿಧ ಜಿಲ್ಲೆಗಳಲ್ಲಿ ನಡೆಯುವ 15 ಕಾರ್ಯಕ್ರಮಗಳಲ್ಲಿ ಪ್ರಧಾನಿ ಮೋದಿ ಭಾಗಿಯಾಗಲಿದ್ದಾರೆ. ವಿಶೇಷ ಏನೆಂದರೆ ಬೆಂಗಳೂರಿನಲ್ಲಿ ಎರಡು ಬೃಹತ್ ರ್ಯಾಲಿಗಳಲ್ಲಿ ಮೋದಿ ಭಾಗಿಯಾಗಲಿದ್ದಾರೆ.ಯಾವ ದಿನ? ಎಲ್ಲಿ ಕಾರ್ಯಕ್ರಮ?
ಮೇ 01- ಚಾಮರಾಜನಗರ, ಉಡುಪಿ, ಬೆಳಗಾವಿ
ಮೇ 03- ಕಲಬುರಗಿ, ಬಳ್ಳಾರಿ, ಬೆಂಗಳೂರು
ಮೇ 05 – ತುಮಕೂರು, ಶಿವಮೊಗ್ಗ, ಹುಬ್ಬಳ್ಳಿ
ಮೇ 07 – ರಾಯಚೂರು, ಚಿತ್ರದುರ್ಗ, ಕೋಲಾರ
ಮೇ 08 – ಬಿಜಾಪುರ, ಮಂಗಳೂರು, ಬೆಂಗಳೂರುSign in to your account
Username or Email Address


Password

 Remember Me


