ಮಂಗಳೂರು: ಟೆಂಪೋ ಟ್ರಾವೆಲರ್ ಮತ್ತು ಕಾರ್ ನಡುವೆ ಡಿಕ್ಕಿಯಾದ ಪರಿಣಾಮ ಐದು ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಸುಬ್ರಹ್ಮಣ್ಯ ಸಮೀಪದ ಇಂಜಾಡಿ ಎಂಬಲ್ಲಿ ನಡೆದಿದೆ.ರಜೆ ಇದ್ದ ಕಾರಣ ಭಾನುವಾರ ಪ್ರವಾಸಿಗರು ಟೆಂಪೋ ಟ್ರಾವೆಲರ್ ನಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಕುಕ್ಕೆ ಸುಬ್ರಹ್ಮಣ್ಯಗೆ ಪ್ರವಾಸಕ್ಕೆ ಬರುತ್ತಿದ್ದರು. ಈ ವೇಳೆ ಇವರ ವಿರುದ್ಧ ದಿಕ್ಕಿನಿಂದ ಕಾರ್ ಬರುತ್ತಿತ್ತು. ಸುಬ್ರಹ್ಮಣ್ಯ ಸಮೀಪದ ಇಂಜಾಡಿ ಬಳಿ ಕಾರು ಮತ್ತು ಟೆಂಪೋ ಟ್ರಾವೆಲರ್ ಮುಖಾಮುಖಿ ಡಿಕ್ಕಿ ಹೊಡೆದಿವೆ.ಪರಿಣಾಮ ಕಾರ್ ನಲ್ಲಿದ್ದ ಮಗು ಸೇರಿ ಐದು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಅಪಘಾತದಲ್ಲಿ ಗಾಯಗೊಂಡಿದ್ದ ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ರವಾನಿಸಲಾಗಿದೆ. ಇನ್ನು ಅಪಘಾತದ ರಭಸಕ್ಕೆ ಟೆಂಪೋ ಟ್ರಾವೆಲರ್ ಮತ್ತು ಕಾರಿನ ಮುಂಭಾಗ ನಜ್ಜುಗುಜ್ಜಾಗಿದೆ.ಈ ಘಟನೆ ಸುಬ್ರಹ್ಮಣ್ಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸಂಭವಿಸಿದೆ.






 Advertisement 




Sign in to your account
Username or Email Address


Password

 Remember Me


