ಹಾವೇರಿ: ಪೈಪ್‍ನಲ್ಲಿ ಸಿಲುಕಿ ನರಳಾಡುತ್ತಿದ್ದ ಮಾನಸಿಕ ಅಸ್ವಸ್ಥೆಯನ್ನು ರಕ್ಷಣೆ ಮಾಡಿದ ಘಟನೆ ಹಾವೇರಿ ಜಿಲ್ಲೆ ಸವಣೂರು ಪಟ್ಟಣದಲ್ಲಿ ನಡೆದಿದೆ.ಗೌರಮ್ಮ ಮನೆಸಿನಕಾಯಿ(36) ಪೈಪ್‍ನಲ್ಲಿ ಸಿಲುಕಿದ್ದ ಮಾನಸಿಕ ಅಸ್ವಸ್ಥೆ. ಇವರು ಕಳೆದ ನಾಲ್ಕೈದು ದಿನಗಳ ಹಿಂದೆ ಮನೆಯಿಂದ ನಾಪತ್ತೆ ಆಗಿದ್ದರು ಎನ್ನಲಾಗಿದೆ. ಪೈಪ್ ನಲ್ಲಿ ನರಳಾಟ ಸದ್ದು ಕೇಳಿದ ಸ್ಥಳೀಯರು, ಅಗ್ನಿಶಾಮಕ ದಳಕ್ಕೆ ಸಿಬ್ಬಂದಿಗೆ ಮಾಹಿತಿ ನೀಡಿ ಸ್ಥಳಕ್ಕೆ ಕರೆಸಿದ್ದಾರೆ.ಅಗ್ನಿಶಾಮಕ ದಳದ ಸಿಬ್ಬಂದಿ ಮತ್ತು ಸ್ಥಳೀಯರು ಪೈಪ್ ಕೊರೆದು ಮಾನಸಿಕ ಅಸ್ವಸ್ಥೆಯನ್ನು ರಕ್ಷಿಸಿದ್ದಾರೆ. ನಂತರ ಅವರನ್ನು ತಾಲೂಕು ಸರಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ.ಈ ಘಟನೆ ಸವಣೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.Sign in to your account
Username or Email Address


Password

 Remember Me


