ಮಂಡ್ಯ: ಎರಡು ತಿಂಗಳ ಗರ್ಭಿಣಿಯ ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ ಜಿಲ್ಲೆಯ ಪಾಂಡವಪುರ ತಾಲೂಕಿನ ಮೇಲುಕೋಟೆಯಲ್ಲಿ ನಡೆದಿದೆ.ಪ್ರೀತಿ (20) ಆತ್ಮಹತ್ಯೆಗೆ ಶರಣಾದ ಮಹಿಳೆ. ಪ್ರೀತಿ ಎಂಟು ತಿಂಗಳ ಹಿಂದೆ ಮೇಲುಕೋಟೆಯ ಆಟೋ ಚಾಲಕ ಮಂಜುನಾಥ ಜೊತೆ ಪ್ರೇಮ ವಿವಾಹವಾಗಿದ್ದಳು. ಆದರೆ ಗುರುವಾರ ಮಧ್ಯಾಹ್ನ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.ಪ್ರೀತಿ ಎರಡು ತಿಂಗಳ ಗರ್ಭಿಣಿಯಾಗಿದ್ದರು ಎಂದು ತಿಳಿದು ಬಂದಿದೆ. ಮಗಳ ಆತ್ಮಹತ್ಯೆಯಿಂದ ನೊಂದ ಸಂಬಂಧಿಕರು ಪತಿಯ ಮನೆಯವರು ಕೊಲೆ ಮಾಡಿದ್ದಾರೆ ಎಂದು ಆರೋಪಿಸುತ್ತಿದ್ದಾರೆ. ಅಷ್ಟೇ ಅಲ್ಲದೇ ಆಕ್ರೋಶಗೊಂಡ ಸಂಬಂಧಿಕರು ಪತಿಯ ಮನೆಗೆ ಮುತ್ತಿಗೆ ಹಾಕಿದ್ದು, ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು. ನಂತರ ಸ್ಥಳಕ್ಕೆ ಮೇಲುಕೋಟೆ ಪೊಲೀಸರು ಆಗಮಿಸಿ ಪರಿಸ್ಥಿತಿಯನ್ನು ಸುಧಾರಿಸಿದ್ದಾರೆ.ಈ ಘಟನೆ ಸಂಬಂಧ ಮೇಲುಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.Sign in to your account
Username or Email Address


Password

 Remember Me


