ಬೆಂಗಳೂರು: ಸಿಎಂ ಸಿದ್ದರಾಮಯ್ಯ ಎಲ್ಲೇ ಸ್ಪರ್ಧೆಗೆ ನಿಂತರೂ ಪ್ರಬಲ ಅಭ್ಯರ್ಥಿಯನ್ನೇ ಕಣಕ್ಕಿಳಿಸಲು ಬಿಜೆಪಿ ನಿರ್ಧರಿಸಿದೆ. ಸಿಎಂ ಸಿದ್ದರಾಮಯ್ಯ ಬದಾಮಿಯಲ್ಲಿ ಸ್ಪರ್ಧೆಗೆ ನಿಂತರೆ ಯಾರನ್ನು ಕಣಕ್ಕಿಳಿಸಬೇಕು ಎಂದು ಬಿಜೆಪಿ ಮಾಸ್ಟರ್ ಪ್ಲ್ಯಾನ್ ರೂಪಿಸಿದೆ.ಬದಾಮಿಯಲ್ಲಿ ಸಿದ್ದರಾಮಯ್ಯ ಕಟ್ಟಿ ಹಾಕಲು ಬಿಜೆಪಿ ಶ್ರೀರಾಮುಲು ಅವರನ್ನು ಸ್ಪರ್ಧೆಗೆ ಸಿದ್ಧವಾಗಿರುವಂತೆ ಸೂಚಿಸಿದೆ. ಬಿಜೆಪಿಯಿಂದ ಶ್ರೀರಾಮುಲು ಅವರನ್ನು ಕಣಕ್ಕಿಳಿಸಲು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ರಾಜ್ಯ ನಾಯಕರಿಗೆ ಸೂಚನೆ ನೀಡಿದ್ದಾರೆ ಎಂಬ ಮಾಹಿತಿ ಬಿಜೆಪಿ ಉನ್ನತ ಮೂಲಗಳಿಂದ ‘ಪಬ್ಲಿಕ್ ಟಿವಿ’ಗೆ ಲಭ್ಯವಾಗಿದೆ.ಈಗಾಗಲೇ ಸಿದ್ದರಾಮಯ್ಯ ಚಾಮುಂಡೇಶ್ವರಿಯಲ್ಲಿ ನಾಮಪತ್ರ ಸಲ್ಲಿಕೆ ಮಾಡಿದ್ದು, ಬದಾಮಿಯಿಂದಲೂ ಸ್ಪರ್ಧೆಗಿಳಿಯಲಿದ್ದಾರೆ ಎಂಬ ಮಾತು ಪ್ರಬಲವಾಗಿ ಕೇಳಿ ಬರುತ್ತಿದೆ. ಒಂದು ವೇಳೆ ಹೈಕಮಾಂಡ್ ನಿರ್ಧಾರ ಕೈಗೊಂಡರೆ ನಾನು ಸ್ಪರ್ಧಿಸುತ್ತೇನೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ಸಿದ್ದರಾಮಯ್ಯ ನಾಮಪತ್ರ ಸಲ್ಲಿಸುವುದನ್ನೇ ಕಾಯುತ್ತಿರುವ ಬಿಜೆಪಿ ಏಪ್ರಿಲ್  23 ರಂದು ನಾಮಪತ್ರ ಸಲ್ಲಿಸಲು ಸಿದ್ಧವಾಗಿರುವಂತೆ ಶ್ರೀರಾಮುಲುಗೆ ಈಗಾಗಲೇ ಸೂಚನೆ ಹೋಗಿದೆ ಎನ್ನಲಾಗಿದೆ.Sign in to your account
Username or Email Address


Password

 Remember Me


