ಬೆಂಗಳೂರು: ತೆಲಂಗಾಣದಿಂದ ತಮಿಳುನಾಡಿನವರೆಗೂ ಮೋಡಗಳ ಸಾಲು ನಿರ್ಮಾಣವಾಗಿರುವ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ನಾಳೆ ಭಾರೀ ಮಳೆಯಾಗುವ ಸಾಧ್ಯತೆಯಿದೆ.ರಾಜ್ಯ ನೈಸರ್ಗಿಕ ಪ್ರಕೃತಿ ವಿಕೋಪ ಇಲಾಖೆ ನಿರ್ದೇಶಕ ಶ್ರೀನಿವಾಸ್ ರೆಡ್ಡಿ ಪಬ್ಲಿಕ್ ಟಿವಿಗೆ ಮಳೆಯಾಗುವ ಬಗ್ಗೆ ಮಾಹಿತಿ ನೀಡಿದ್ದು, ರಾಜ್ಯದ ದಕ್ಷಿಣ ಒಳನಾಡು, ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ಭಾರೀ ಮಳೆಯಾಗುವ ಸಂಭವವಿದೆ ಎಂದು ತಿಳಿಸಿದ್ದಾರೆ.ಮಳೆಯ ಜೊತೆ ಗುಡುಗು, ಮಿಂಚು, ಗಾಳಿ ಬೀಸುವ ಸಾಧ್ಯತೆಯಿದೆ. ಬೆಂಗಳೂರಿನಲ್ಲಿ ಕೂಡ ಮೋಡ ಕವಿದ ವಾತಾವರಣವಿರಲಿದ್ದು. ಅಲ್ಲಲ್ಲಿ ಚುದುರಿದ ಮಳೆಯಾಗಲಿದೆ ಎಂದು ಶ್ರೀನಿವಾಸ್ ರೆಡ್ಡಿ ಮಾಹಿತಿ ನೀಡಿದ್ದಾರೆ.Sign in to your account
Username or Email Address


Password

 Remember Me


