ಚಿಕ್ಕಮಗಳೂರು: ಸರ್ಕಾರಿ ಬಸ್ ಹಾಗೂ ಕಾರು ಮುಖಾಮುಖಿ ಡಿಕ್ಕಿಯಾದ ಪರಿಣಾಮ ಒಂದೇ ಕುಟುಂಬದ ನಾಲ್ವರು ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ತಾಲೂಕಿನ ಹಿರೇಗೌಡ ಗ್ರಾಮದ ಬಳಿ ನಡೆದಿದೆ.ಮೃತರನ್ನ ಚಾಲಕ ನಿಂಗೇಶ್, ದೀಪಾ ಹಾಗೂ ಶ್ರೇಯಾ ಎಂದು ಗುರುತಿಸಲಾಗಿದೆ. ಮೃತರು ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನವರು ಎಂದು ತಿಳಿದು ಬಂದಿದೆ. ಶಿವಮೊಗ್ಗದಿಂದ ಕೊಡ್ಲಿಪೇಟೆಗೆ ಹೋಗಿ ಚಿಕ್ಕಮಗಳೂರು ಮಾರ್ಗವಾಗಿ ಶಿವಮೊಗ್ಗಕ್ಕೆ ಹಿಂದಿರುಗುವಾಗ ಈ ದುರ್ಘಟನೆ ಸಂಭವಿಸಿದೆ. ಸಾವನ್ನಪ್ಪಿದ ಒಬ್ಬ ವ್ಯಕ್ತಿಯ ಹೆಸರು ತಿಳಿದು ಬಂದಿಲ್ಲ.ಕಾರು ಹಾಗೂ ಬಸ್ ಮುಖಾಮುಖಿ ಡಿಕ್ಕಿಯಾದ ರಭಸಕ್ಕೆ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮತ್ತೊಬ್ಬರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ಅಪಘಾತದಲ್ಲಿ ಮಗು ಜೇಷ್ಠ ಹಾಗೂ ಇನ್ನಿಬ್ಬರಿಗೆ ತೀವ್ರ ಗಾಯವಾಗಿದ್ದು, ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಹಾಸನಕ್ಕೆ ರವಾನಿಸಲಾಗಿದೆ.ಬಸ್ಸಿಗೆ ಡಿಕ್ಕಿಯಾದ ರಭಸಕ್ಕೆ ಕಾರು ಬಹುತೇಕ ನಜ್ಜುಗಜ್ಜಾಗಿದ್ದು, ಶವಗಳನ್ನ ಹೊರತೆಗೆಯಲು ಪೊಲೀಸರು ಹರಸಾಹಸ ಪಟ್ಟಿದ್ದಾರೆ. ಈ ಸಂಬಂಧ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.Sign in to your account
Username or Email Address


Password

 Remember Me


