ಚಿಕ್ಕೋಡಿ: ಅಂಬೇಡ್ಕರ್ ಜಯಂತಿ ಮೆರವಣಿಗೆ ವೇಳೆ ಎರಡು ಗುಂಪುಗಳ ಮಧ್ಯೆ ಕಲ್ಲು ತೂರಾಟವಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ನಾಗರಾಳ ಗ್ರಾಮದಲ್ಲಿ ನಡೆದಿದೆ.ಎರಡು ಗುಂಪುಗಳ ನಡುವೆ ನಡೆದ ಗಲಭೆಯಲ್ಲಿ ಸುಮಾರು 30 ಕ್ಕೂ ಹೆಚ್ಚು ದ್ವಿಚಕ್ರ ವಾಹನಗಳು ಹಾಗೂ 4 ಕಾರುಗಳು ಜಖಂಗೊಂಡಿವೆ. ಅಲ್ಲದೇ 5 ಕ್ಕೂ ಹೆಚ್ಚು ಅಂಗಡಿಗಳು ಹಾಗೂ ಮನೆಗಳ ಗಾಜುಗಳನ್ನ ಧ್ವಂಸಗೊಳಿಸಲಾಗಿದೆ. ಅಂಬೇಡ್ಕರ್ ಜಯಂತಿ ಕಾರ್ಯಕ್ರಮದ ಅಂಗವಾಗಿ ಹಮ್ಮಿಕೊಳ್ಳಲಾಗಿದ್ದ ಮೆರವಣಿಗೆ ವೇಳೆ ಸವರ್ಣೀಯರ ಕೇರಿಯಲ್ಲಿ ಹೋದ ಸಂದರ್ಭದಲ್ಲಿ ಎರಡು ಗುಂಪುಗಳ ನಡೆದ ವಾಗ್ವಾದವೇ ಘಟನೆಗೆ ಕಾರಣ ಎನ್ನಲಾಗಿದೆ. ಸದ್ಯ ಗ್ರಾಮದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದ್ದು ಸ್ಥಳಕ್ಕೆ ಅರೆ ಸೇನಾ ಪಡೆ ಸೇರಿದಂತೆ ಹೆಚ್ಚಿನ ಪೊಲೀಸ್ ಬಂದೋಬಸ್ತ್ ಕಲ್ಪಿಸಲಾಗಿದೆ.ಚಿಕ್ಕೋಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಗಲಾಟೆಯಲ್ಲಿ ಭಾಗಿಯಾಗಿರುವ ಕಿಡಿಗೇಡಿಗಳ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ.Sign in to your account
Username or Email Address


Password

 Remember Me


