ಹಾವೇರಿ: ಮರಕ್ಕೆ ಖಾಸಗಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಓರ್ವ ಸ್ಥಳದಲ್ಲೇ ಮೃತಪಟ್ಟು, 25ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ.ಈ ಘಟನೆ ಹಾವೇರಿ ಜಿಲ್ಲೆ ಹಾನಗಲ್ ತಾಲೂಕಿನ ನಾಕೂರು ಕ್ರಾಸ್ ಬಳಿ ಘಟನೆ ನಡೆದಿದೆ. ಬೆಂಗಳೂರಿನಿಂದ ಶಿರಸಿಯತ್ತ ತೆರಳುತ್ತಿದ್ದ ಬಸ್ ಮರಕ್ಕೆ ಡಿಕ್ಕಿ ಹೊಡೆದಿದೆ. ಪರಿಣಾಮ 25ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಮೃತನ ಬಗ್ಗೆ  ಇನ್ನಷ್ಟೇ ತಿಳಿದುಬರಬೇಕಿದೆ.ಗಾಯಾಳುಗಳನ್ನು ಕೂಡಲೇ ತಾಲೂಕು ಸರಕಾರಿ ಆಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆ ನೀಡಲಾಗುತ್ತದೆ. ಸ್ಥಳಕ್ಕೆ ಹಾನಗಲ್ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.ಚಾಲಕನ ನಿದ್ದೆ ಮಂಪರು ಅಥವಾ ಅತೀ ವೇಗದ ಚಾಲನೆಯಿಂದಾಗಿ ಈ ಘಟನೆ ಸಂಭವಿಸಿದೆಯೋ ಎಂಬುದರ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.  ಹಾನಗಲ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಪ್ರಕರಣ ನಡೆದಿದೆ.Sign in to your account
Username or Email Address


Password

 Remember Me


