ಗದಗ: ಎದುರಿಗೆ ಬರುತ್ತಿದ್ದ ಬೈಕ್ ಗೆ ಗೂಡ್ಸ್ ಲಾರಿ ಡಿಕ್ಕಿಯಾಗಿ ಸವಾರರಿಬ್ಬರು ಸಾವನ್ನಪ್ಪಿರುವ ಅಪಘಾತ ಗದಗ ತಾಲೂಕಿನ ಲಕ್ಕುಂಡಿ ಬಳಿ ನಡೆದಿದೆ.ಗದಗ ತಾಲೂಕಿನ ಜಂತ್ಲಿಶಿರೂರ ಗ್ರಾಮದ ಗಂಗಯ್ಯ ಜಂತ್ಲಿ (52) ಮತ್ತು ಲಕ್ಷ್ಮಣ್ ವಡ್ಡಟ್ಟಿ (45) ಅಪಘಾತದಲ್ಲಿ ಮೃತ ದುರ್ದೈವಿಗಳು. ಮೃತರು ಗದಗನಿಂದ ಗ್ರಾಮಕ್ಕೆ ತೆರಳುತ್ತಿದ್ದಾಗ ಎದುರಿನಿಂದ ಬಂದ ಲಾರಿ ಬೈಕಿಗೆ ಡಿಕ್ಕಿ ಹೊಡೆದು, ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ತಾಗಿ ಪಲ್ಟಿಯಾಗಿದೆ. ಸವಾರರಿಬ್ರು ಸ್ಥಳದಲ್ಲೇ ಸಾವನ್ನಪ್ಪಿದ್ರೆ, ಲಾರಿ ಚಾಲಕನೂ ಗಾಯಗೊಂಡಿದ್ದಾನೆ.ಲಾರಿ ಚಾಲಕನ ಅಜಾಗರೂಕತೆಯಿಂದ ಅಪಘಾತ ಸಂಭವಿಸಿದೆ ಎಂದು ತಿಳಿದು ಬಂದಿದೆ. ಗಾಯಾಳು ಲಾರಿ ಚಾಲಕನ್ನು ನಗರದ ಜಿಮ್ಸ್ ಆಸ್ಪತ್ರೆಗೆ ದಾಖಲಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಮೃತರ ಕುಟುಂಬದವರ ಆಕ್ರಂದನ ಮುಗಿಲು ಮುಟ್ಟಿದೆ. ಈ ಕುರಿತು ಗದಗ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.Sign in to your account
Username or Email Address


Password

 Remember Me


