ರಾಮನಗರ: ಚುನಾವಣೆ ಹಿನ್ನೆಲೆಯಲ್ಲಿ ಚೆಕ್ ಪೋಸ್ಟ್ ನಲ್ಲಿ ತಪಾಸಣೆ ನಿರತ ಮುಖ್ಯಪೇದೆಗೆ ಗೂಡ್ಸ್ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ ಮೃತಪಟ್ಟ ಘಟನೆ ರಾಮನಗರ ತಾಲೂಕಿನ ಹೆಜ್ಜಾಲ ಬಳಿ ನಡೆದಿದೆ.ಮಹಾಲಿಂಗ(39) ಸಾವನ್ನಪ್ಪಿದ ಪೇದೆಯಾಗಿದ್ದು, ಇವರು ಬಿಡದಿ ಪೊಲೀಸ್ ಠಾಣೆಯ ಮುಖ್ಯಪೇದೆ. ಚುನಾವಣೆ ಹಿನ್ನೆಲೆ ಬೆಂಗಳೂರು ಮೈಸೂರು ಹೆದ್ದಾರಿಯಲ್ಲಿ ರಾತ್ರಿ ಚೆಕ್ ಪೋಸ್ಟ್ ನಲ್ಲಿ ಕಾರು ತಪಾಸಣೆ ನಡೆಸುವ ವೇಳೆ ವೇಗವಾಗಿ ಬಂದ ಗೂಡ್ಸ್ ವಾಹನ ಇವರಿಗೆ ಡಿಕ್ಕಿ ಹೊಡೆದಿದೆ. ಪರಿಣಾಮ ತೀವ್ರವಾಗಿ ಗಾಯಗೊಂಡಿದ್ದ ಪೇದೆ ಮಹಾಲಿಂಗ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲು ತೆರಳುವ ವೇಳೆ ಮಾರ್ಗ ಮಧ್ಯೆ ಸಾವನ್ನಪ್ಪಿದ್ದಾರೆ.ಇನ್ನೂ ಗೂಡ್ಸ್ ವಾಹನದ ಚಾಲಕ ಪರಾರಿಯಾಗಿದ್ದು, ಬಿಡದಿಯ ಕುಂಬಳಗೂಡು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.Sign in to your account
Username or Email Address


Password

 Remember Me


