ಬೆಂಗಳೂರು: ಸ್ಯಾಂಡಲ್‍ವುಡ್‍ನ ಮಹತ್ವಕಾಂಕ್ಷೆಯ, ಕನ್ನಡ ಚಿತ್ರರಂಗದಲ್ಲಿ ಹೊಸ ಮೈಲಿಗಲ್ಲು ಬರೆಯಲು ಸಿದ್ಧವಾಗಿರುವ `ಮುನಿರತ್ನ ಕುರುಕ್ಷೇತ್ರ’ ಚಿತ್ರದ ಮೇಕಿಂಗ್ ರಿಲೀಸ್ ಆಗಿದೆ.ಚಾಲೆಂಜಿಂಗ್ ಸ್ಟಾರ್ ದರ್ಶನ್, ಕ್ರೇಜಿಸ್ಟಾರ್ ರವಿಚಂದ್ರನ್, ಅರ್ಜುನ್ ಸರ್ಜಾ, ರೆಬಲ್ ಸ್ಟಾರ್ ಅಂಬರೀಶ್, ನಿಖಿಲ್ ಕುಮಾರ್ ಹಾಗೂ ಕುರುಕ್ಷೇತ್ರದ ಅಷ್ಟು ಕಲಾವಿದರು ಶೂಟಿಂಗ್ ಟೈಮಲ್ಲಿ ಹೇಗಿದ್ದರು. ಹೈದ್ರಾಬಾದ್‍ನ ರಾಮೋಜಿರಾವ್ ಫಿಲ್ಮ್ ಸಿಟಿಯಲ್ಲಿ ಚಿತ್ರೀಕರಣ ವೇಳೆ ಏನೆಲ್ಲಾ ಫನ್ ನಡೀಯಿತು. ನಿರ್ಮಾಪಕ ಮುನಿರತ್ನ ಚಿತ್ರತಂಡದ ಜೊತೆ ಹೇಗೆಲ್ಲಾ ಕಾಲ ಕಳೆದರೂ ಅನ್ನೋದನ್ನು ಮೇಕಿಂಗ್‍ನಲ್ಲಿ ತೋರಿಸಲಾಗಿದೆ.ಮುನಿರತ್ನ ಅವರ ಕನಸಿನ ಸಿನಿಮಾ `ಕುರುಕ್ಷೇತ್ರ’ ಬರೋಬ್ಬರಿ 50 ರಿಂದ 60 ಕೋಟಿ ರೂ. ವೆಚ್ಚದಲ್ಲಿ ವೃಷಭಾದ್ರಿ ಪ್ರೊಡಕ್ಷನ್ ಅಡಿಯಲ್ಲಿ ನಿರ್ಮಾಣವಾಗುತ್ತಿದೆ. ನಿರ್ದೇಶಕ ನಾಗಣ್ಣ ಸಾರಥ್ಯದಲ್ಲಿ ಕುರುಕ್ಷೇತ್ರ ಅದ್ಧೂರಿಯಾಗಿ ಮೂಡಿಬಂದಿದ್ದು, ಈ ಮೊದಲು ದರ್ಶನ್ ಅಭಿನಯದ `ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ಚಿತ್ರವನ್ನು ನಾಗಣ್ಣ ನಿರ್ದೇಶಿಸಿದ್ದರು. ಇನ್ನೇನು ಕೆಲವೇ ದಿನಗಳಲ್ಲಿ ವಿಶ್ವಾದ್ಯಂತ ತೆರೆಕಾಣಲಿದೆ.ದುರ್ಯೋಧನ ಪಾತ್ರದಲ್ಲಿ ದರ್ಶನ್ ಮಿಂಚುತ್ತಿದ್ದು, ಅರ್ಜುನ್ ಸರ್ಜಾ (ಕರ್ಣ), ರವಿಚಂದ್ರನ್ (ಶ್ರೀಕೃಷ್ಣ), ಅಂಬರೀಶ್ (ಭೀಷ್ಮ), ಸೋನು ಸೂದ್ (ಅರ್ಜುನ), ನಿಖಿಲ್ ಕುಮಾರ್ (ಅಭಿಮನ್ಯು), ಮೇಘನಾ ರಾಜ್ (ಭಾನುಮತಿ), ಸ್ನೇಹಾ (ದ್ರೌಪದಿ) ಸೇರಿದಂತೆ ಹಲವರು ಅಭಿನಯಿಸಿದ್ದಾರೆ.Sign in to your account
Username or Email Address


Password

 Remember Me


