ಕೋಲಾರ: ಅಕ್ರಮವಾಗಿ ಪಡಿತರ ಅಕ್ಕಿ ಸಾಗಾಣೆ ಮಾಡುತ್ತಿದ್ದ ಟೆಂಪೋ ಪಲ್ಟಿಯಾಗಿರುವ ಘಟನೆ ಜಿಲ್ಲೆ ಬಂಗಾರಪೇಟೆ ಪಟ್ಟಣದ ಹೊರವಲಯದಲ್ಲಿ ನಡೆದಿದೆ.ಅಕ್ರಮವಾಗಿ ಸುಮಾರು 75 ಮೂಟೆ ಪಡಿತರ ಅಕ್ಕಿಯನ್ನು ಚುನಾವಣಾ ಅಧಿಕಾರಿಗಳ ಕಣ್ತಪ್ಪಿಸಿ ಸಾಗಾಣೆ ಮಾಡುತ್ತಿದ್ದರು. ಈ ವೇಳೆ ಚುನಾವಣಾ ಅಧಿಕಾರಿಗಳಿಗೆ ಮಾಹಿತಿ ತಿಳಿದು ಟೆಂಪೋವನ್ನು ಚೇಸಿಂಗ್ ಮಾಡಿದ್ದಾರೆ. ನಂತರ ಬಂಗಾರಪೇಟೆ ಪಟ್ಟಣದ ಹೊರವಲಯದಲ್ಲಿ ಹೋಗುತ್ತಿದ್ದಂತೆ ಚಾಲಕನ ನಿಯಂತ್ರಣ ತಪ್ಪಿ ಅಕ್ಕಿ ತುಂಬಿದ್ದ ಟೆಂಪೋ ಪಲ್ಟಿಯಾಗಿದೆ.ಈ ಸಂಬಂಧ ಬಂಗಾರಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಅಧಿಕಾರಿಗಳು 75 ಅಕ್ಕಿ ಮೂಟೆ ಮತ್ತು ಲಾರಿಯನ್ನು ವಶಕ್ಕೆ ಪಡೆದಿದ್ದಾರೆ. ಆದರೆ ಘಟನೆಯ ಬಳಿಕ ಟೆಂಪೋ ಚಾಲಕ ಪರಾರಿಯಾಗಿದ್ದಾನೆ.


 Advertisement 







 Advertisement 




Sign in to your account
Username or Email Address


Password

 Remember Me


