ಚಿತ್ರದುರ್ಗ: ಕಾರು ಮತ್ತು ಲಾರಿ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಸ್ಥಳದಲ್ಲಿಯೇ ಇಬ್ಬರು ಸಾವನ್ನಪ್ಪಿದ್ದು, ಮೂವರ ಸ್ಥಿತಿ ಗಂಭೀರವಾಗಿರುವ ಘಟನೆ ಜಿಲ್ಲೆಯ ಹಿರಿಯೂರು ತಾಲೂಕಿನ ಯರಬಳ್ಳಿ ಗ್ರಾಮದ ಬಳಿ ನಡೆದಿದೆ.ತುಮಕೂರು ಮೂಲದ ಶಬಾನಾ ಅಫೀಸ್(50) ಮತ್ತು ಅಜ್ಮಲ್ ಪಾಷಾ (32) ಮೃತ ದುರ್ದೈವಿಗಳು. ಕಾರು ಬಳ್ಳಾರಿಯಿಂದ ತುಮಕೂರು ಕಡೆಗೆ ತೆರಳುತ್ತಿತ್ತು. ಲಾರಿ ಇವರ ವಿರುದ್ಧ ದಿಕ್ಕಿನಲ್ಲಿ ಬರುತ್ತಿತ್ತು. ಈ ವೇಳೆ ಯರಬಳ್ಳಿ ಗ್ರಾಮದ ಬಳಿ ಕಾರು ಮತ್ತು ಲಾರಿ ವೇಗವಾಗಿ ಬಂದು ಮುಖಾಮುಖಿ ಡಿಕ್ಕಿಯಾಗಿದೆ.ಪರಿಣಾಮ ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಇನ್ನು ಅಪಘಾತದಲ್ಲಿ ಗಾಯಗೊಂಡಿರುವ ಗಾಯಾಳುಗಳನ್ನು ಸಮೀಪದ ಚಳ್ಳಕೆರೆ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನು ಘಟನೆ ನಡೆದ ಸ್ಥಳಕ್ಕೆ ಐಮಂಗಲ ಪೊಲೀಸರು ಬಂದು ಪರಿಶೀಲನೆ ನಡೆಸಿದ್ದಾರೆ.


 Advertisement 







 Advertisement 




Sign in to your account
Username or Email Address


Password

 Remember Me


