ಚಿತ್ರದುರ್ಗ: ಇಂದಿನಿಂದ ಪ್ರಚಾರ ಆರಂಭಿಸಿದ್ದೇನೆ. ಆದ್ರೆ ಇವತ್ತು ಬೆಳಗ್ಗೆ ನಡೆದ ಘಟನೆ ನೋವು ತಂದಿದೆ. ನಾನು ಯಾವುದೇ ಸ್ವಾರ್ಥ ಇಟ್ಟುಕೊಳ್ಳದೇ ಮೊಳಕಾಲ್ಮೂರು ಕ್ಷೇತ್ರದಿಂದ ಸ್ಪರ್ಧೆ ಮಾಡಿದ್ದೇನೆ ಎಂದು ಸಂಸದ ಶ್ರೀರಾಮುಲು ಹೇಳಿದ್ದಾರೆ. ಇದನ್ನೂ ಓದಿ: ಬಿಜೆಪಿ ಭಿನ್ನಮತೀಯರಿಂದ ಶ್ರೀರಾಮುಲು ಕಾರಿಗೆ ಕಲ್ಲು ತೂರಾಟ – ಪೊಲೀಸರಿಂದ ಲಾಠಿ ಚಾರ್ಜ್ಕೊಂಡ್ಲಹಳ್ಳಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಶಾಸಕ ತಿಪ್ಪೇಸ್ವಾಮಿಯವರು ಅವರ ಬೆಂಬಲಿಗರ ಮೂಲಕ ಗಲಾಟೆ ಮಾಡಿಸಿದ್ದಾರೆ. ಇದೂ ಪ್ರಚೋದನಾಕಾರಿ ಗಲಾಟೆಯಾಗಿದ್ದು, ನನ್ನ ಮೇಲೆ ಕಲ್ಲು ತೂರಾಟ ಮಾಡಿದವರಿಗೆ ಒಳ್ಳೆಯದಾಗಲಿ. ಪ್ರಚೋದನೆ ಮಾಡುವವರಿಗೆ ದೇವರು ನೋಡಿಕೊಳ್ಳುತ್ತಾನೆ. ನಾನು ಯಾವುದೇ ದೂರು ನೀಡುವುದಿಲ್ಲ ಎಂದು ತಿಳಿಸಿದರು.ನಾನು ಬೆನ್ನು ತೋರಿಸಿ ರಾಜಕಾರಣ ಮಾಡಿಲ್ಲ. ತಿಪ್ಪೇಸ್ವಾಮಿಯವರು ಅವರ ದಾರಿ ಅವರು ನೋಡಿಕೊಳ್ಳಲಿ. ಇನ್ನು ಮೇಲೆ ನಮಗೂ ಅವರಿಗೂ ಸಂಬಧವಿಲ್ಲ. ಈ ರೀತಿ ಘಟನೆಯಾದ ನಂತರ ಮೃದುಧೋರಣೆ ತಳೆಯುವುದಿಲ್ಲ ಎಂದು ಸ್ಪಷ್ಟಪಡಿಸಿದರು.ನಾನು ಗೆದ್ದೆ ಗೆಲ್ಲುವೆ. ಮೊಳಕಾಲ್ಮೂರು ಕ್ಷೇತ್ರದ ಜನರು ನನ್ನನ್ನು ಗೆಲ್ಲಿಸುವ ವಿಶ್ವಾಸವಿದೆ. ನಾನು ರಾಜೀನಾಮೆ ನೀಡಿ ಸ್ಪರ್ಧೆ ಮಾಡುವುದಿಲ್ಲ. ನನ್ನ ಹಾಗೂ ಯಡಿಯೂರಪ್ಪ ರಾಜೀನಾಮೆ ಬಗ್ಗೆ ಹೈಕಮಾಂಡ್ ತೀರ್ಮಾನ ಕೈಗೊಳ್ಳುತ್ತೆ. ಗೆದ್ದ ನಂತರವೇ ರಾಜೀನಾಮೆ ಬಗ್ಗೆ ತೀರ್ಮಾನ ಕೈಗೊಳ್ಳುತ್ತೇನೆ ಎಂದು ತಿಳಿಸಿದರು. Sign in to your account
Username or Email Address


Password

 Remember Me


