ಬೆಂಗಳೂರು: ಹಿರಿಯ ನಟ ಅಶ್ವಥ್ ಪುತ್ರ ಶಂಕರ್ ಅಶ್ವಥ್ ಸಿನಿಮಾ ಅವಕಾಶ ಇಲ್ಲದೆ ಕ್ಯಾಬ್ ಓಡಿಸುತ್ತಿದ್ದರು. ಕೆಲ ತಿಂಗಳುಗಳ ಹಿಂದೆ ಈ ಸುದ್ದಿ ಮಾಧ್ಯಮಗಳಲ್ಲಿ ಪ್ರಚಾರವಾಗಿತ್ತು.ಒಬ್ಬ ದೊಡ್ಡ ನಟನ ಮಗನ ಇಂದಿನ ಪರಿಸ್ಥಿತಿ ನೋಡಿ ಎಲ್ಲರೂ ಬೇಸರಗೊಂಡಿದ್ದರು. ಆಗ ಶಂಕರ್ ಅಶ್ವಥ್ ಅವರಿಗೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಸಹಾಯ ಮಾಡುವುದಾಗಿ ತಿಳಿಸಿದ್ದರು.ಈ ಹಿಂದೆ ಶಂಕರ್ ಅಶ್ವಥ್ ಅವರ ಪರಿಸ್ಥಿತಿ ಕಂಡು ಬೇಸರಗೊಂಡಿದ್ದ ದರ್ಶನ್ ಅವರಿಗೆ ತಮ್ಮ ಸಿನಿಮಾದಲ್ಲಿ ಅವಕಾಶ ನೀಡುವುದಾಗಿ ಹೇಳಿದ್ದರು. ಈಗ ದರ್ಶನ್ ತಮ್ಮ ಮಾತಿನಂತೆ ನಡೆದುಕೊಂಡಿದ್ದು, ಶಂಕರ್ ಅಶ್ವಥ್ ಮುಖದಲ್ಲಿ ನಗುವನ್ನು ಮೂಡಿಸಿದ್ದಾರೆ. ಇದನ್ನೂ ಓದಿ: ಜೀವನ ನಿರ್ವಹಣೆಗೆ ಟ್ಯಾಕ್ಸಿ ಓಡಿಸುತ್ತಿದ್ದ ಶಂಕರ್ ಅಶ್ವಥ್‍ಗೆ ಆಸರೆಯಾದ ದರ್ಶನ್!ದರ್ಶನ್ ತಾವು ನಟಿಸುತ್ತಿರುವ `ಯಜಮಾನ’ ಸಿನಿಮಾದಲ್ಲಿ ಶಂಕರ್ ಅಶ್ವಥ್ ಅವರಿಗೆ ಅವಕಾಶ ನೀಡಿದ್ದಾರೆ. ಈ ಸಿನಿಮಾದ ಒಂದು ಪಾತ್ರದಲ್ಲಿ ಶಂಕರ್ ಅಶ್ವಥ್ ಕಾಣಿಸಿಕೊಳ್ಳುತ್ತಿದ್ದಾರೆ. ಸಿನಿಮಾದ ಶೂಟಿಂಗ್ ನಲ್ಲಿ ಇದೀಗ ಶಂಕರ್ ಅಶ್ವಥ್ ಭಾಗಿಯಾಗಿದ್ದು, ಈ ವೇಳೆ ದರ್ಶನ್ ಜತೆಗೆ ಫೋಟೋ ತೆಗೆದುಕೊಂಡಿದ್ದಾರೆ.`ಯಜಮಾನ’ ಸಿನಿಮಾ ಬಿ. ಸುರೇಶ್ ಬ್ಯಾನರ್ ನಲ್ಲಿ ಸಿನಿಮಾ ನಿರ್ಮಾಣ ಆಗುತ್ತಿದೆ. `ವಿಷ್ಣುವರ್ಧನ’ ಸಿನಿಮಾದ ಖ್ಯಾತಿಯ ಪಿ.ಕುಮಾರ್ ಈ ಸಿನಿಮಾವನ್ನು ನಿರ್ದೇಶನ ಮಾಡುತ್ತಿದ್ದಾರೆ. ಈ ಸಿನಿಮಾದಲ್ಲಿ ದರ್ಶನ್ ಜೊತೆಗೆ ರಶ್ಮಿಕಾ ಮಂದಣ್ಣ ನಾಯಕಿ ಆಗಿದ್ದಾರೆ. ಸಿನಿಮಾದ ಚಿತ್ರೀಕರಣ ಭರ್ಜರಿಯಾಗಿ ನಡೆಯುತ್ತಿದೆ. `ಕುರುಕ್ಷೇತ್ರ’ ನಂತರ `ಯಜಮಾನ’ ಚಿತ್ರ ಬಿಡುಗಡೆಯಾಗಲಿದೆ.






 Advertisement 




Sign in to your account
Username or Email Address


Password

 Remember Me


