ರಾಮನಗರ: ಮರಳು ತುಂಬಿದ್ದ ಟ್ರ್ಯಾಕ್ಟರ್- ಬೈಕ್ ಗೆ ಡಿಕ್ಕಿಯಾಗಿ ಪೊಲೀಸ್ ಪೇದೆಯೊಬ್ಬರು ಸಾವನ್ನಪ್ಪಿದ್ದ ಘಟನೆ ಚನ್ನಪಟ್ಟಣ ತಾಲೂಕಿನ ಅಂಬಾಡಹಳ್ಳಿ ಗ್ರಾಮದ ಬಳಿ ನಡೆದಿದೆ.ನಾಗರಾಜ್(40) ಮೃತ ಪೇದೆ. ನಾಗರಾಜ್ ಹಾಗೂ ಪುತ್ರಿ ತಮ್ಮ ಮನೆಯ ಗೃಹ ಪ್ರವೇಶದ ಆಮಂತ್ರಣ ಪತ್ರಿಕೆ ಕೊಡಲು ಹೋಗುತ್ತಿದ್ದ ವೇಳೆ ಈ ಘಟನೆ ಸಂಭವಿಸಿದೆ.ಘಟನೆಯಲ್ಲಿ ಮೃತ ನಾಗರಾಜು ಪುತ್ರಿಗೆ ಗಂಭೀರ ಗಾಯಗಳಾಗಿದ್ದು, ಬೆಂಗಳೂರು ಆಸ್ಪತ್ರೆಗೆ ರವಾನಿಸಲಾಗಿದೆ. ಮೃತ ಪೇದೆ ಚನ್ನಪಟ್ಟಣ ತಾಲೂಕಿನ ಸಾದರಹಳ್ಳಿ ಗ್ರಾಮದ ನಿವಾಸಿಯಾಗಿದ್ದು, ಬೆಂಗಳೂರಿನ ಪೊಲೀಸ್ ಠಾಣೆಯೊಂದರಲ್ಲಿ ಪೇದೆಯಾಗಿ ಕಾರ್ಯನಿರ್ವಹಿಸುತ್ತಿದ್ದರು.ಈ ಬಗ್ಗೆ ಅಕ್ಕೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.Sign in to your account
Username or Email Address


Password

 Remember Me


