ಹಾಸನ: ನಾನು ಕಾನೂನು ಪದವೀಧರನಾಗಿದ್ದು ನನಗೆ ಕಾನೂನು ಗೊತ್ತಿದೆ. ನಾನು ನೀತಿ ಸಂಹಿತೆ ಉಲ್ಲಂಘನೆ ಮಾಡಿಲ್ಲ ಎಂದು ಪಶು ಸಂಗೋಪನಾ ಸಚಿವ ಎ ಮಂಜು ಹೇಳಿದ್ದಾರೆ.ಅರಕಲಗೂಡು ತಾಲೂಕಿನ ಕೊಣನೂರಿನಲ್ಲಿ ಪ್ರತಿಕ್ರಿಯಿಸಿದ ಅವರು, ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ನನ್ನ ಮಗಳ ಸಮಾನ. ನನಗೆ ಅವರ ವಯಸ್ಸಿನ ಮಗಳಿದ್ದಾಳೆ. ಯಾರದೋ ಕುಮ್ಮಕ್ಕಿನಿಂದ ಅವರು ಹೀಗೆಲ್ಲಾ ವರ್ತಿಸುತ್ತಿದ್ದಾರೆ ಎಂದು ಆರೋಪಿಸಿದರು.  ಇದನ್ನೂ ಓದಿ: ಸಚಿವ ಎ.ಮಂಜು ವಿರುದ್ಧ ಡಿಸಿ ರೋಹಿಣಿ ಸೆಡ್ಡು – ಹಾಸನದ ಮಂತ್ರಿಗಳ ಕಚೇರಿಗೆ ಬೀಗಬಗರ್ ಹುಕುಂ ಸಾಗುವಳಿ ಪತ್ರಗಳನ್ನು ಕಾನೂನು ಬದ್ಧವಾಗಿಯೇ ಹಂಚಿಕೆ ಮಾಡಿದ್ದೇನೆ. ಅವರ ವಿರುದ್ಧ ಹಗೆತನ ಸಾಧಿಸುತ್ತಿಲ್ಲ. ಅವರೇ ದುರುದ್ದೇಶದಿಂದ ಹೀಗೆ ನಡೆದುಕೊಳ್ಳುತ್ತಿದ್ದಾರೆ. ಈ ಸಂಬಂಧ ಚುನಾವಣಾ ಆಯೋಗಕ್ಕೆ ಸವಿವರ ದೂರು ನೀಡಿದ್ದೇನೆ ಎಂದು ತಿಳಿಸಿದರು. ಇದನ್ನೂ ಓದಿ: ನೀತಿ ಸಂಹಿತೆ ಉಲ್ಲಂಘನೆ: ಸಚಿವ ಎ.ಮಂಜು ವಿರುದ್ಧ ಎಫ್‍ಐಆರ್ ದಾಖಲುಚುನಾವಣೆಯಲ್ಲಿ ಅಕ್ರಮ ನಡೆಯುತ್ತಿದೆ ಎಂಬ ಮಾಜಿ ಪ್ರಧಾನಿ ಹೆಚ್‍ಡಿ ದೇವೇಗೌಡ ಅವರ ಆರೋಪಕ್ಕೆ ಪ್ರತಿಕ್ರಿಯಿಸಿದ ಸಚಿವರು ಹಿಂದೆ ಅವರು ಮಾಡಿರುವ ತಪ್ಪನ್ನು ನನಗೆ ಹೇಳುತ್ತಿದ್ದಾರೆ ಎಂದು ತಿರುಗೇಟು ನೀಡಿದರು.Sign in to your account
Username or Email Address


Password

 Remember Me


