ಹಾಸನ: ಖಾಸಗಿ ಬಸ್ ಪಲ್ಟಿಯಾದ ಪರಿಣಾಮ ವಿದ್ಯಾರ್ಥಿ ಸೇರಿ ಇಬ್ಬರು ಮೃತಪಟ್ಟಿರುವ ಘಟನೆ ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕು ಬ್ಯಾಡರಹಳ್ಳಿ ಗೇಟ್ ಬಳಿ ನಡೆದಿದೆ.ಶಶಿಧರ್ (14) ಮತ್ತು ದಯಾನಂದ್(38) ಮೃತ ದುರ್ದೈವಿಗಳು. ಈ ಅಪಘಾತದಲ್ಲಿ 10 ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಸಮೀಪದ ಆಸ್ಪತ್ರೆಗೆ ರವಾನಿಸಲಾಗಿದೆ.ಖಾಸಗಿ ಬಸ್ ಕುಂದಾಪುರದಿಂದ ಬೆಂಗಳೂರಿಗೆ ತೆರಳುತ್ತಿತ್ತು. ಬಸ್ಸಿನಲ್ಲಿ 21 ಮಂದಿ ಪ್ರಯಾಣಿಸುತ್ತಿದ್ದರು. ಈ ವೇಳೆ ಬ್ಯಾಡರಹಳ್ಳಿ ಗೇಟ್ ಬಳಿ ಬಸ್ ಪಲ್ಟಿಯಾಗಿದೆ. ಚಾಲಕನ ನಿದ್ದೆ ಮಂಪರು ಹಾಗೂ ಬಸ್ ನ ತಾಂತ್ರಿಕ ದೋಷದಿಂದ ಬಸ್ ಪಲ್ಟಿಯಾಗಿದೆ ಎನ್ನಲಾಗಿದೆ.ಶಶಿಧರ್ ಶಾಲಾ ಅಡ್ಮಿಷನ್ ಗಾಗಿ ಬೆಂಗಳೂರಿಗೆ ತೆರಳುತ್ತಿದ್ದನು. ಬಸ್ ಪಲ್ಟಿಯಾದ ಪರಿಣಾಮ ಶಶಿಧರ್ ಮತ್ತು ದಯಾನಂದ್ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಅಪಘಾತದಲ್ಲಿ ಗಾಯಗೊಂಡ ಗಾಯಾಳುಗಳನ್ನು ಬೆಳ್ಳೂರು ಬಿಜಿಎಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.ಈ ಬಗ್ಗೆ ಹಿರೀಸಾವೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.






 Advertisement 




Sign in to your account
Username or Email Address


Password

 Remember Me


