ಕಾರವಾರ: ನಿಂತಿದ್ದ ಲಾರಿಗೆ ಹಿಂಬದಿಯಿಂದ ಬಂದು ಬೈಕ್ ಡಿಕ್ಕಿ ಹೊಡೆದ ಪರಿಣಾಮ ವಿದ್ಯಾರ್ಥಿಗಳಿಬ್ಬರು ಸಾವನ್ನಪ್ಪಿರುವ ಘಟನೆ ಉತ್ತರ ಕನ್ನಡ ಜಲ್ಲೆಯ ಕಾರವಾರ ತಾಲೂಕಿನ ಮಾಜಾಳಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ನಡೆದಿದೆ.ಚೇತನ್ (21) ಮತ್ತು ಶಿವರಾಜ್(20) ಮೃತ ದುರ್ದೈವಿಗಳು. ಚೇತನ್ ಮೂಲತಃ ಭದ್ರಾವತಿಯ ನಿವಾಸಿಯಾಗಿದ್ದು, ಕಾರವಾರ ಸರ್ಕಾರಿ ಇಂಜಿನಿಯರಿಂಗ್ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದನು. ಶಿವರಾಜ್ ಶಿರವಾಡ ಮೂಲದವನಾಗಿದ್ದು, ಸರ್ಕಾರಿ ಕಾಲೇಜಿನಲ್ಲಿ ಬಿ.ಕಾಂ ಪದವಿ ಮಾಡುತ್ತಿದ್ದನು ಎಂದು ತಿಳಿದು ಬಂದಿದೆ.ಚೇತನ್ ಮತ್ತು ಶಿವರಾಜ್ ಗೋವಾದಿಂದ ಕಾರವಾರ ಕಡೆಗೆ ಬರುತ್ತಿದ್ದರು. ಈ ವೇಳೆ ಅತೀ ವೇಗದಿಂದ ಬಂದು ಕೆಟ್ಟು ನಿಂತಿದ್ದ ಲಾರಿಗೆ ಬೈಕ್ ಡಿಕ್ಕಿ ಹೊಡೆದಿದ್ದಾರೆ. ಪರಿಣಾಮ ಇಬ್ಬರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.ಈ ಘಟನೆ ಸಂಬಂಧ ಚಿತ್ತಾಕುಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಮೃತದೇಹಗಳನ್ನು ಜಿಲ್ಲಾ ಸರ್ಕಾರಿ ಆಸ್ಪತ್ರೆ ಶವಗಾರಕ್ಕೆ ರವಾನಿಸಿದ್ದಾರೆ.Sign in to your account
Username or Email Address


Password

 Remember Me


