ದಾವಣಗೆರೆ: ನಾನು 2018 ರ ಚುನಾವಣಾ ಪೂರ್ವದಲ್ಲಿ ರಾಜ್ಯದ 15 ಜಿಲ್ಲೆಗಳಲ್ಲಿ ಬರ ಅಧ್ಯಯನ (Drought Study) ಮಾಡಿದ್ದೆ. ಆದರೆ ಈ ಬಾರಿ ನನ್ನನ್ನು ಬರ ಅಧ್ಯಯನ ತಂಡದಿಂದ ಹೊರ ಇಟ್ಟಿದ್ದಾರೆ. ಪಕ್ಷದ ಕೆಲ ನಾಯಕರ ದುರಾಡಳಿತ ಪ್ರಶ್ನೆ ಮಾಡಿದ್ದಕ್ಕೆ ಈ ರೀತಿ ಮಾಡಿದ್ದಾರೆ ಎಂದು ಮಾಜಿ ಸಚಿವ ಎಂಪಿ ರೇಣುಕಾಚಾರ್ಯ (MP Renukacharya) ಅಸಮಾಧಾನ ಹೊರಹಾಕಿದ್ದಾರೆ.ಹೊನ್ನಾಳಿಯಲ್ಲಿ ಮಾತನಾಡಿದ ರೇಣುಕಾಚಾರ್ಯ, ಇದ್ದಿದ್ದು ಇದ್ದಹಾಗೆ ಹೇಳಿದ್ರೆ ಎದ್ದು ಬಂದು ಎದೆಗೆ ಒದ್ರಂತೆ ಹಂಗಾಗಿದೆ. ಪಕ್ಷದಲ್ಲಿರುವ ಲೋಪವನ್ನು ನೇರವಾಗಿ ಹೇಳಿದ್ದಕ್ಕೆ ಕೆಲ ನಾಯಕರು ನನ್ನನ್ನು ಹೊರಗಿಟ್ಟಿದ್ದಾರೆ. ನಮ್ಮ ಬಿಜೆಪಿಯಲ್ಲಿ ಒಂದು ತಂಡ ಇದೆ ಅದು ಈ ಕೆಲಸ ಮಾಡುತ್ತಿದೆ ಎಂದು ಆರೋಪಿಸಿದರು.ಈ ಚುನಾವಣಾ ಪೂರ್ವದಲ್ಲಿ ಜೆಡಿಎಸ್ ಬಿಜೆಪಿ (BJP) ಹೊಂದಾಣಿಕೆ ಮಾಡಿಕೊಂಡಿದ್ರು. ಆದ್ದರಿಂದ ನಮ್ಮ ಪಕ್ಷದ ಹಿರಿಯ ನಾಯಕರನ್ನು ಕಡೆಗಣಿಸಿದ್ದಾರೆ. ಯಡಿಯೂರಪ್ಪರನ್ನು ಕೆಳಗೆ ಇಳಿಸಿದ್ರು. ಈಶ್ವರಪ್ಪ, ಜಗದೀಶ್ ಶೆಟ್ಟರ್, ಸವದಿ ಸೇರಿದಂತೆ ಫ್ರಂಟ್ ಲೈನ್ ನಾಯಕರನ್ನು ಮುಗಿಸಿದರು. ಒಬ್ಬ ವ್ಯಕ್ತಿ ದೆಹಲಿಯಲ್ಲಿ ಕೂತು ಸಿಎಂ ಆಗಲು ಇದೆಲ್ಲ ಮಾಡಿದ್ದಾನೆ ಎಂದು ಪರೋಕ್ಷವಾಗಿ ಬಿಎಲ್ ಸಂತೋಷ್ ವಿರುದ್ಧ ರೇಣುಕಾಚಾರ್ಯ ಆಕ್ರೋಶ ಹೊರಹಾಕಿದರು. ಇದನ್ನೂ ಓದಿ: ಕೃಷಿ ಪಂಪ್‌ಸೆಟ್‌ಗಳಿಗೆ ಪ್ರತಿದಿನ 7 ಗಂಟೆ ವಿದ್ಯುತ್‌ – ಸಿಎಂ ಮಹತ್ವದ ಸಭೆಯಲ್ಲಿ ನಿರ್ಧಾರಯಡಿಯೂರಪ್ಪರವರ ಪರವಾಗಿ ಮಾತನಾಡಿದ್ದಕ್ಕೆ ಈ ರೀತಿ ಮಾಡ್ತಾ ಇದ್ದಾರೆ. ಪರವಾಗಿ ಮಾತನಾಡಿದರೆ ನೋಟಿಸ್, ಅವರ ವಿರುದ್ಧವಾಗಿ ಮಾತನಾಡಿದರೆ ನೋಟೀಸ್ ಇಲ್ಲ. ಇದು ಯಾವ ನ್ಯಾಯ? ಎಂದು ಎಂಪಿ ರೇಣುಕಾಚಾರ್ಯ ಕಿಡಿಕಾರಿದರು. ಇದನ್ನೂ ಓದಿ: ಚುನಾವಣಾ ಹೊಸ್ತಿಲಲ್ಲೇ ʼಕೈʼಗೆ ಶಾಕ್-‌ ಕಾಂಗ್ರೆಸ್‌ ತೊರೆದು ಬಿಜೆಪಿ ಸೇರಿದ ಶಾಸಕSign in to your account
Username or Email Address


Password

 Remember Me


