ನವದೆಹಲಿ: ಕಲಬರುಗಿಯ ಅಫಜಲ್ಪುರ ಕ್ಷೇತ್ರದ ಕಾಂಗ್ರೆಸ್ ಶಾಸಕ ಮಾಲೀಕಯ್ಯ ಗುತ್ತೇದಾರ್ ಬಿಜೆಪಿಗೆ ಅಧಿಕೃತವಾಗಿ ಸೇರ್ಪಡೆಯಾಗಿದ್ದಾರೆ.ಇಂದು ದೆಹಲಿಯ ಪಕ್ಷದ ಕಚೇರಿಯಲ್ಲಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ನೇತೃತ್ವದಲ್ಲಿ ಬಿಜೆಪಿ ಸೇರ್ಪಡೆಯಾದರು. ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಶಾಸಕ ಗುತ್ತೇದರ್ ಅವರಿಗೆ ಪಕ್ಷದ ಶಾಲು ಹಾಕುವ ಮೂಲಕ ಸ್ವಾಗತಿಸಿದರು. ಈ ವೇಳೆ ಕೇಂದ್ರ ಸಚಿವರಾದ ಅನಂತಕುಮಾರ್, ಪಿಯೂಷ್ ಗೋಯಲ್, ಪ್ರಕಾಶ್ ಜಾವಡೇಕರ್, ಸಂಸದ ಬಿ ಶ್ರೀರಾಮುಲು, ರಾಜ್ಯ ಉಸ್ತುವಾರಿ ಮುರುಳೀಧರ್ ರಾವ್ ಉಪಸ್ಥಿತರಿದ್ದರು.ಉತ್ತರ ಕರ್ನಾಟಕದ ಪ್ರಭಾವಿ ಕಾಂಗ್ರೆಸ್ ಮುಂಖರಾಗಿದ್ದ ಶಾಸಕ ಮಾಲೀಕಯ್ಯ ಗುತ್ತೇದಾರ್ ಅಫಜಲ್ಪುರ ವಿಧಾನಸಭಾ ಕ್ಷೇತ್ರದಲ್ಲಿ ಆರು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದಾರೆ. ಈ ಬಾರಿ ಬಿಜೆಪಿ ಸೇರ್ಪಡೆಯಾಗಿದ್ದು ಪಕ್ಷದ ಟಿಕೆಟ್ ಖಚಿತವಾಗಿದೆ.1985, 1989, 1994, 1999, 2008, 2013 ರಲ್ಲಿ ಮಾಲೀಕಯ್ಯ ಗುತ್ತೇದಾರ್ ಅಫಜಲಪುರ ಕ್ಷೇತ್ರದಿಂದ ಆಯ್ಕೆ ಆಗಿದ್ದಾರೆ. 2013ರಲ್ಲಿ ಗುತ್ತೇದಾರ್ 5,238 ಮತಗಳ ಅಂತರದಿಂದ ಜಯಗಳಿಸಿದ್ದರು. ಗುತ್ತೇದಾರ್ 38,093 ಮತಗಳನ್ನು ಪಡೆದಿದ್ದರೆ, ಕೆಜೆಪಿಯಿಂದ ಸ್ಪರ್ಧಿಸಿದ್ದ ಎಂವೈ ಪಟೀಲ್ 32,855 ಮತಗಳನ್ನು ಪಡೆದಿದ್ದರು.  ಇದನ್ನೂ ಓದಿ: ಖರ್ಗೆ ಒಬ್ಬೊಬ್ಬರನ್ನು ಮುಗಿಸುತ್ತಿದ್ದಾರೆ, `ಕೈ’ ನಿಂದ ಹೊರ ಬಂದ್ರೆ ಈಡಿಗ ಶಕ್ತಿ ತೋರಿಸ್ತೀನಿ: ಗುತ್ತೇದಾರ್ ಗುಡುಗುSign in to your account
Username or Email Address


Password

 Remember Me


