ದಾವಣಗೆರೆ: ಕಳ್ಳತನ ಮಾಡಿ ಓಡಿ ಹೋಗುವಾಗ ಕಳ್ಳನೊಬ್ಬ ಕಟ್ಟಡದ ಮೇಲಿಂದ ಬಿದ್ದು ಸಾವನ್ನಪ್ಪಿರುವ ಘಟನೆ ದಾವಣಗೆರೆಯ ನಿಟ್ಟುವಳ್ಳಿ ಬಡಾವಣೆಯಲ್ಲಿ ನಡೆದಿದೆ.ಭಾನುವಾರ ರಾತ್ರಿ ಕಳ್ಳತನ ಮಾಡಲು ಬಂದಿದ್ದ ಐದು ಜನ ಕಳ್ಳರು ಮಹಿಳೆಯ ಸರಗಳ್ಳತನ ಮಾಡಲು ಮುಂದಾಗಿದ್ದಾರೆ. ಈ ವೇಳೆ ಕಳ್ಳರನ್ನು ನೋಡಿದ ಮಹಿಳೆ ಕೂಗಿಕೊಂಡಿದ್ದರಿಂದ ಕಂಗಾಲಾಗಿ ಓಡಿ ಹೋಗಲು ಯತ್ನಿಸಿದ್ದಾರೆ.ಕಟ್ಟಡದಿಂದ ಕಟ್ಟಡಕ್ಕೆ ಹಾರಿ ನಾಲ್ವರು ಕಳ್ಳರು ತಪ್ಪಿಸಿಕೊಂಡಿದ್ದಾರೆ. ಆದರೆ ಒಬ್ಬ ಕಳ್ಳ ಮಾತ್ರ ಕಟ್ಟಡ ಹಾರುವಾಗ ನಿಯಂತ್ರಣ ತಪ್ಪಿ ಕೆಳಗೆ ಬಿದ್ದಿದ್ದಾನೆ. ಆಯ ತಪ್ಪಿ ಬಿದ್ದು ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.ಇತ್ತೀಚಿಗೆ ದಾವಣಗೆರೆ ನಗರದಲ್ಲಿ ಸರಣಿಗಳ್ಳತನ ನಡೆಯುತ್ತಿದೆ. ಎರಡು ದಿನಗಳ ಹಿಂದೆ ದೇವಸ್ಥಾನ ಹಾಗೂ ಅಂಗಡಿಗಳಲ್ಲಿ ಕಳ್ಳತನಗಳು ನಡೆದಿದ್ದವು. ಈ ಘಟನೆ ಕೆಟಿಜೆ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಪ್ರಕರಣ ನಡೆದಿದೆ. ಪೊಲೀಸರು ತನಿಖೆ ನಡೆಸುತ್ತಿದ್ದು,  ಮೃತ ಕಳ್ಳನ ಗುರುತು ಇನ್ನು ಪತ್ತೆಯಾಗಿಲ್ಲ.


 Advertisement 







 Advertisement 




Sign in to your account
Username or Email Address


Password

 Remember Me


