ಉಡುಪಿ: ಕ್ರೀಡಾ ಸಚಿವ ಪ್ರಮೋದ್ ಮಧ್ವರಾಜ್ ವಿರುದ್ಧ ಎಫ್‍ಐಆರ್ ದಾಖಲಾಗಿದೆ. ಚುನಾವಣಾ ನೀತಿಸಂಹಿತೆಯನ್ನು ಉಲ್ಲಂಘನೆ ಮಾಡಿದ್ದಾರೆಂದು ಆರೋಪಿಸಿ ಇದೀಗ ಸಚಿವರ ವಿರುದ್ಧ ಎಫ್‍ಐಆರ್ ದಾಖಲಾಗಿದೆ.ಆಸ್ಟ್ರೇಲಿಯಾ ದ ಗೋಲ್ಡ್ ಕೋಸ್ಟ್ ನಲ್ಲಿ ಭಾರತೀಯ ಕ್ರೀಡಾಪಟು ಗುರುರಾಜ್ ಪೂಜಾರಿ ವೇಟ್ ಲಿಫ್ಟಿಂಗ್ ನಲ್ಲಿ ಬೆಳ್ಳಿ ಪದಕ ಗೆದ್ದಿದ್ದರು. ಈ ಹಿನ್ನೆಲೆಯಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ್ದ ಸಚಿವ ಮಧ್ವರಾಜ್, ಗುರುರಾಜ್ ಗೆ ಕ್ರೀಡಾ ಇಲಾಖೆ 25 ಲಕ್ಷ ನಗದು ಮತ್ತು ಸರ್ಕಾರಿ ನೌಕರಿಯನ್ನು ರಾಜ್ಯ ಸರ್ಕಾರ ನೀಡುತ್ತದೆ ಎಂದಿದ್ದರು.  ಇದನ್ನೂ ಓದಿ: ಕಾಮನ್‍ವೆಲ್ತ್ ಗೇಮ್ಸ್ ನಲ್ಲಿ ಕನ್ನಡಿಗನ ಕೇಕೆ- ಬೆಳ್ಳಿ ಪದಕ ಗೆದ್ದ ಉಡುಪಿಯ ಗುರುರಾಜ್ಕಾಮನ್‍ವೆಲ್ತ್ ಗೇಮ್ಸ್ ಗೆ ತೆರಳುವ ಮುನ್ನವೇ ಪ್ರಶಸ್ತಿ ಬಗ್ಗೆ ಕ್ರೀಡಾನೀತಿಯಲ್ಲಿ ಉಲ್ಲೇಖವಾಗಿದೆ. ಇದು ಈಗ ಮಾಡುತ್ತಿರುವ ಘೋಷಣೆಯಲ್ಲ ಎಂದೂ ಕೂಡ ಸಚಿವರು ಅದೇ ಸಂದರ್ಭದಲ್ಲಿ ಸ್ಪಷ್ಟನೆ ನೀಡಿದ್ದರು. ಆದರೆ ಚುನಾವಣೆ ಸಂದರ್ಭದಲ್ಲಿ ಇಂತಹ ಹೇಳಿಕೆ ಸರಿಯಲ್ಲ. ಇದು ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ ಎಂದು ಚುನಾವಣಾ ಅಧಿಕಾರಿಗಳು ಹೇಳಿದ್ದಾರೆ. ಇದನ್ನೂ ಓದಿ: ಕಾಮನ್ ವೆಲ್ತ್ ಗೇಮ್ಸ್ ನಲ್ಲಿ ಬೆಳ್ಳಿ ಗೆದ್ದ ಗುರುರಾಜ್‍ಗೆ ಸರ್ಕಾರಿ ಕೆಲಸ, 25 ಲಕ್ಷ ನಗದು ಬಹುಮಾನ- ಪ್ರಮೋದ್ ಮಧ್ವರಾಜ್ಕ್ರೀಡಾ ನೀತಿಯ ಬಗ್ಗೆ ಗೆಜೆಟ್ ನೋಟಿಫಿಕೇಶನ್ ಆಗಿಲ್ಲ. ಹೀಗಾಗಿ ಮತದಾನ ಸಂದರ್ಭದಲ್ಲಿ ಇಂತಹ ಹೇಳಿಕೆಗಳು ಮತದಾರರನ್ನು ಓಲೈಸುವಂತಾಗುತ್ತದೆ ಅಲ್ಲದೇ ಆಮಿಷ ಒಡ್ಡುವಂತಾಗುತ್ತದೆ ಎಂದು ಆರೋಪಿಸಿ ಚುನಾವಣಾಧಿಕಾರಿಗಳು ಉಡುಪಿ ನಗರ ಠಾಣೆಯಲ್ಲಿ ಎಫ್ ಐ ಆರ್ ದಾಖಲು ಮಾಡಿದ್ದಾರೆ.Sign in to your account
Username or Email Address


Password

 Remember Me


