ಬೆಂಗಳೂರು: ರೈಲ್ವೇ ಹಳಿ ದಾಟುವಾಗ ರೈಲಿಗೆ ಸಿಲುಕಿ ವ್ಯಕ್ತಿಯೊಬ್ಬ ಮೃತಪಟ್ಟಿರುವ ಘಟನೆ ಶನಿವಾರ ರಾತ್ರಿ ಬೆಂಗಳೂರಿನ ಹೆಬ್ಬಾಳದಲ್ಲಿ ನಡೆದಿದೆ.ಅನಂತಪುರ ಮೂಲದ 55 ವರ್ಷದ ಶ್ರೀನಿವಾಸಲು ಮೃತಪಟ್ಟ ದುರ್ದೈವಿ. ಬಿಬಿಎಂಪಿಯಲ್ಲಿ ಸ್ವೀಪರ್ ಆಗಿ ಕೆಲಸ ಮಾಡುತ್ತಿದ್ದ ಶ್ರೀನಿವಾಸಲು ಕಳೆದ ನಾಲ್ಕು ದಿನದ ಹಿಂದೆ ಊರಿಗೆ ಹೋಗಿದ್ದರು. ಹೀಗಾಗಿ ಶನಿವಾರ ರಾತ್ರಿ 10 ಗಂಟೆಗೆ ಬೆಂಗಳೂರಿಗೆ ವಾಪಸ್ ಬಂದಿದ್ದರು.ಹೆಬ್ಬಾಳದಲ್ಲಿರುವ ಮನೆಗೆ ತೆರಳುವ ಸಂದರ್ಭದಲ್ಲಿ ರೈಲ್ವೇ ಹಳಿ ದಾಟುವಾಗ ರೈಲಿಗೆ ಸಿಲುಕಿ ಮೃತಪಟ್ಟಿದ್ದಾರೆ. ಸ್ಥಳಕ್ಕೆ ಯಶವಂತಪುರ ರೈಲ್ವೇ ಪೊಲೀಸರು ದೌಡಾಯಿಸಿದ್ದು, ಪರಿಶೀಲನೆ ನಡಿಸಿ ಮೃತದೇಹವನ್ನ ಬೌರಿಂಗ್ ಆಸ್ಪತ್ರೆಯ ಶವಗಾರಕ್ಕೆ ರವಾನಿಸಿದ್ದಾರೆ.ಈ ಸಂಬಂಧ ಯಶವಂತಪುರ ರೈಲ್ವೇ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


 Advertisement 







 Advertisement 




Sign in to your account
Username or Email Address


Password

 Remember Me


