ಬಾಗಲಕೋಟೆ: ಚುನಾವಣೆ ಹತ್ತಿರವಾಗುತ್ತಿದ್ದಂತೆ ಜಿಲ್ಲೆಯ ಜಮಖಂಡಿ ಶಾಸಕ ಸಿದ್ದು ನ್ಯಾಮಗೌಡ ಅವರು ಮಾತನಾಡಿದ್ದಾರೆ ಎನ್ನಲಾಗಿರುವ ಮೊಬೈಲ್ ಆಡಿಯೋ ಒಂದು ಹೊರಬಿದ್ದಿದ್ದು, ಸಖತ್ ವೈರಲ್ ಆಗಿದೆ.ಈ ಆಡಿಯೋದಲ್ಲಿ ಇರುವ ವ್ಯಕ್ತಿಯ ಧ್ವನಿ ಶಾಸಕ ಸಿದ್ದು ನ್ಯಾಮಗೌಡ ಅವರ ಧ್ವನಿಗೆ ಹೋಲಿಕೆ ಇದ್ದು, ಕಾಂಗ್ರೆಸ್ ಮಹಿಳಾ ಕಾರ್ಯಕರ್ತರ ಜೊತೆ ಮೊಬೈಲ್ ನಲ್ಲಿ ಸಂಭಾಷಣೆ ನಡೆಸಿದ್ದಾರೆ ಎಂಬ ಚರ್ಚೆ ಆರಂಭವಾಗಿದೆ. ಸಂಭಾಷಣೆಯಲ್ಲಿ ಮಹಿಳೆ ಹಾಗೂ ವ್ಯಕ್ತಿಯ ನಡುವೆ ನಿಕಟ ಪರಿಚಯ ಇರುವುದು ಸ್ಪಷ್ಟವಾಗುತ್ತದೆ.21 ನಿಮಿಷವಿರುವ ಆಡಿಯೋದಲ್ಲಿ ಮಹಿಳೆಯೊಂದಿಗೆ ಸರಸ ಸಲ್ಲಾಪ ನಡೆಸಿದ್ದಾರೆ. ಇನ್ನು ಮಹಿಳೆಗೆ ನಿನ್ನನ್ನು ನಗರಸಭೆ ಅಧ್ಯಕ್ಷೆಯನ್ನಾಗಿ ಮಾಡುತ್ತೇನೆ ಎಂದು ಪುಸಲಾಯಿಸಲಾಗಿದೆ. ಕಳೆದ ಮೂರು ದಿನಗಳ ಹಿಂದೆಯೇ ಆಡಿಯೋ ಬಿಡುಗಡೆಯಾಗಿದ್ದು, ಕ್ಷೇತ್ರದ ಎಲ್ಲೆಡೆ ವೈರಲ್ ಆಗಿದೆ.ಈ ಕುರಿತು ಪಬ್ಲಿಕ್ ಟಿವಿಗೆ ಪ್ರತಿಕ್ರಿಯೆ ನೀಡಿರುವ ಶಾಸಕ ನ್ಯಾಮಗೌಡ, ಚುನಾವಣೆ ಸಮೀಪವಾಗುತ್ತಿದಂತೆ ನನ್ನ ವಿರುದ್ಧ ಅಪಪ್ರಚಾರ ನಡೆಲು ಇಂತಹ ನಕಲಿ ಆಡಿಯೋ ಬಿಡುಗಡೆ ಮಾಡಲಾಗಿದೆ. ಈ ಕುರಿತು ಸೂಕ್ತ ಕ್ರಮ ಕೈಗೊಳ್ಳುವಂತೆ ಎಸ್‍ಪಿ ಅವರಿಗೆ ಈಗಾಗಲೇ ದೂರು ನೀಡಿದ್ದೇನೆ. ತನಿಖೆ ಬಳಿಕ ಸತ್ಯಾಂಶ ಹೊರಬರಲಿದೆ ಎಂದು ಸ್ಪಷ್ಟನೆ ನೀಡಿದ್ದಾರೆ.https://www.youtube.com/watch?v=9tl4el4G4-4Sign in to your account
Username or Email Address


Password

 Remember Me


