ಬಾಗಲಕೋಟೆ: ಎಸ್‍ಎಸ್‍ಎಲ್‍ಸಿ ಪರೀಕ್ಷೆಗೆ ವಿದ್ಯಾರ್ಥಿಗಳನ್ನು ಹೊತ್ತೊಯ್ಯುತ್ತಿದ್ದ ಟಾಟಾ ಏಸ್ ವಾಹನ ಪಲ್ಟಿಯಾಗಿರುವ ಘಟನೆ ಜಿಲ್ಲೆಯ ಬಾದಾಮಿ ತಾಲೂಕಿನ ಹೂಲಗೇರಿ ಗ್ರಾಮದ ಬಳಿ ನಡೆದಿದೆ.ಘಟನೆಯಲ್ಲಿ 15 ವಿದ್ಯಾರ್ಥಿಗಳು ಗಾಯಗೊಂಡಿದ್ದು, ಅವರನ್ನು ಸಮೀಪದ ಕೆರೂರ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ವಿದ್ಯಾರ್ಥಿಗಳನ್ನು ಯಂಕಚಿ ಗ್ರಾಮದ ಸರಕಾರಿ ಶಾಲೆ ವಿದ್ಯಾರ್ಥಿಗಳು ಎಂದು ಗುರುತಿಸಲಾಗಿದೆ.ವಿದ್ಯಾರ್ಥಿಗಳು ಇಂದು ಯಂಕಂಚಿ ಗ್ರಾಮದಿಂದ ನೀರಬೂದಿಹಾಳ ಗ್ರಾಮಕ್ಕೆ ಪರೀಕ್ಷೆ ಬರೆಯಲೆಂದು ತೆರಳುತ್ತಿದ್ದರು. ಈ ವೇಳೆ ಹೂಲಗೇರಿ ಗ್ರಾಮದ ಬಳಿ ರಸ್ತೆ ದುರಸ್ತಿ ಇದ್ದ ಕಾರಣ ಹಾಗೂ ಚಾಲಕ ವೇಗವಾಗಿ ಓಡಿಸುತ್ತಿದ್ದ ಪರಿಣಾಮ ಟಾಟಾ ಏಸ್ ವಾಹನ ಪಲ್ಟಿಯಾಗಿದೆ. ಗಾಯಗೊಂಡವರೆಲ್ಲಾ ಎಸ್‍ಎಸ್‍ಎಲ್‍ಸಿ ವಿದ್ಯಾರ್ಥಿಗಳಾಗಿದ್ದು, ಅವರಲ್ಲಿ ಓರ್ವ ವಿದ್ಯಾರ್ಥಿಗೆ ಗಂಭೀರ ಗಾಯವಾಗಿದ್ದು, ಚಿಕಿತ್ಸೆಗಾಗಿ ಆಸ್ಪತ್ರೆಗೆ ರವಾನಿಸಲಾಗಿದೆ.ಈ ಘಟನೆ ಸಂಬಂಧ ಕೆರೂರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.






 Advertisement 




Sign in to your account
Username or Email Address


Password

 Remember Me


