ಬೆಂಗಳೂರು: ನಿರ್ಮಾಣ ಹಂತದ ಮೆಟ್ರೋ ಪಿಲ್ಲರ್ ನ ಕಬ್ಬಿಣದ ಸರಳು ಬಿದ್ದು ಎರಡು ಕಾರುಗಳು ಜಖಂ ಅಗಿರುವ ಘಟನೆ ಬೆಂಗಳೂರಿನ ಬನ್ನೇರುಘಟ್ಟ ಮುಖ್ಯ ರಸ್ತೆಯಲ್ಲಿ ನಡೆದಿದಿದೆ.ಅಪೋಲೋ ಆಸ್ಪತ್ರೆ ಬಳಿ ಮೆಟ್ರೋ ಕಾಮಗಾರಿ ನಡೆಯುತಿದ್ದು, ತಡರಾತ್ರಿ 12.20ರ ಸಮಯದಲ್ಲಿ ಇದ್ದಕಿದ್ದ ಹಾಗೆ ಪಿಲ್ಲರ್ ರಸ್ತೆಗೆ ಬಿದ್ದಿದೆ. ಪರಿಣಾಮ ಶಿಫ್ಟ್ ಮತ್ತು ಈಟಿಯಸ್ ಕಾರ್ ಜಖಂಗೊಂಡಿದೆ. ಘಟನೆಯಿಂದ ಅದೃಷ್ಟವಶಾತ್ ಯಾವುದೇ ಪ್ರಾಣಹಾನಿಯಾಗಿಲ್ಲ.ಕೆಲಕಾಲ ಘಟನಾ ಸ್ಥಳದಲ್ಲಿ ಟ್ರಾಫಿಕ್ ಜಾಮ್ ಊಂಟಾಗಿತ್ತು. ಕೂಡಲೇ ಸ್ಥಳಕ್ಕೆ ಅಗಮಿಸಿದ ಪೊಲೀಸರು ಟ್ರಾಫಿಕ್ ಕ್ಲಿಯರ್ ಮಾಡಿ ಸಂಚಾರಕ್ಕೆ ಅನುವು ಮಾಡಿಕೊಟ್ಟಿದ್ದಾರೆ.ಈ ಸಂಬಂಧ ಮೈಕೋ ಲೇಔಟ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.Sign in to your account
Username or Email Address


Password

 Remember Me


