ಬೆಂಗಳೂರು: ಇಡೀ ಕರ್ನಾಟಕ ವಿಧಾನಸಭಾ ಚುನಾವಣೆಯ ಬಿಸಿಯೇರಿಸಿಕೊಂಡಿದೆ. ಈ ಸಂದರ್ಭದಲ್ಲಿ ರಾಜಕೀಯ ವಲಯದಲ್ಲಿ ಬಿರುಸಿನ ವಾತಾವರಣ ಇರೋದು ಸಹಜವೇ. ಆದರೆ ಈ ಸಲ ಚಿತ್ರರಂಗದಲ್ಲಿಯೂ ಚುನಾವಣಾ ಪ್ರಭಾವ ಬಲು ಜೋರಾಗಿದೆ. ಆ ಸ್ಟಾರ್ ರಾಜಕೀಯಕ್ಕಿಳೀತಾರೆ, ಮತ್ಯಾರಿಗೋ ಟಿಕೆಟ್ ಪಕ್ಕಾ ಆಗಿದೆ ಎಂಬೆಲ್ಲ ಗಾಸಿಪ್ ಗಳು ಮಾಮೂಲಿ. ಆದರೆ ಈ ರೇಸಿನಲ್ಲಿ ಕಿಚ್ಚ ಸುದೀಪ್ ಅವರ ಹೆಸರೂ ಚಾಲ್ತಿಯಲ್ಲಿರೋದು ವಿಶೇಷ!ಕಿಚ್ಚ ಸುದೀಪ್ ದಿಢೀರ್ ಎಂದು ಮೂರನೇ ಬಾರಿ ಮುಖ್ಯಮಂತ್ರಿ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿದ್ದಾರೆ. ಮೂರು ದಿನಗಳ ಹಿಂದೆಯಷ್ಟೇ ಸುದೀಪ್ ಬೆಂಗಳೂರಿನಲ್ಲಿರುವ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್‍ಡಿಕೆ ಮನೆಗೆ ಭೇಟಿ ನೀಡಿ ಮಾತುಕತೆ ನಡೆಸಿದ್ದರು. ಇದೀಗ ಇಂದು ಬೆಳಗ್ಗೆ ಸಿಎಂ ಅಧಿಕೃತ ನಿವಾಸ ಕಾವೇರಿಯಲ್ಲಿ ಭೇಟಿಯಾಗಿರುವುದು ಭಾರೀ ಕುತೂಹಲ ಮೂಡಿಸಿದೆ. ಇದನ್ನು ಓದಿ: ಮಾಜಿ ಸಿಎಂ ಎಚ್‍ಡಿಕೆ ಮನೆಗೆ ಸುದೀಪ್ ಭೇಟಿ – 2 ಗಂಟೆಗಳ ಕಾಲ ಸುದೀರ್ಘ ಚರ್ಚೆಮಾಜಿ ಮುಖ್ಯಮಂತ್ರಿ ಮತ್ತು ಜೆಡಿಎಸ್ ರಾಜ್ಯಾಧ್ಯಕ್ಷ ಕುಮಾರಸ್ವಾಮಿ ಅವರ ಮನೆಗೆ ಸ್ವತಃ ಬೇಟಿ ನೀಡಿ ಸರಿಸುಮಾರು ಎರಡು ಗಂಟೆಗಳ ಕಾಲ ಮಾತುಕತೆ ನಡೆಸಿರೋದು ರಾಜಕೀಯ ಪಂಡಿತರ ತಲೆ ಕೆಡಿಸಿದೆ. ಈ ಸಂದರ್ಭದಲ್ಲಿ ನಿಖಿಲ್ ಕುಮಾರಸ್ವಾಮಿ, ಅನಿತಾ ಕುಮಾರಸ್ವಾಮಿ ಮತ್ತು ಶಾಸಕ ಸಾರಾ ಮಹೇಶ್ ಮುಂತಾದವರು ಹಾಜರಿದ್ದರು.ಚುನಾವಣೆ ಸಮಯ ಹತ್ತಿರವಾಗುತ್ತಿದ್ದಂತೆಯೇ ನಟ ಸುದೀಪ್ ಅವರ ಈ ಭೇಟಿಗಳು ಕುತೂಹಲ ಮೂಡಿಸಿದೆ. ಈ ಹಿಂದೆ ಬೆಂಗಳೂರು ಹೊರವಲಯ ನೆಲಮಂಗಲ ಶಾಸಕ ಶ್ರೀನಿವಾಸಮೂರ್ತಿ ಕಿಚ್ಚ ಸುದೀಪ್ ಅವರನ್ನು ಭೇಟಿ ಮಾಡಿದ್ದರು. ಶಾಸಕ ಶ್ರೀನಿವಾಸಮೂರ್ತಿ ಹಾಗೂ ಸುದೀಪ್ ಭೇಟಿಯಾದ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು.Sign in to your account
Username or Email Address


Password

 Remember Me


