ಮುಂದಿನ ಮೂರು ದಿನಗಳ ಕಾಲ ರಾಜ್ಯದ ಅನೇಕ ಭಾಗಗಳಲ್ಲಿ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.ಸುಮಾರು 10 ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿ ಭಾಗಗಳಲ್ಲಿ ಇಂದಿನಿಂದ ಮೂರು ದಿನಗಳ ಕಾಲ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ದಕ್ಷಿಣ ಒಳನಾಡಿಗೆ ಇಂದು ಆರೆಂಜ್ ಅಲರ್ಟ್ ಹಾಗೂ ನ.6 ಮತ್ತು 7 ರಂದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಮಂಡ್ಯ, ಮೈಸೂರು, ಶಿವಮೊಗ್ಗ ಜಿಲ್ಲೆಗಳು ಸೇರಿದಂತೆ ಉತ್ತರ ಒಳನಾಡಿನ ಜಿಲ್ಲೆಗಳಲ್ಲೂ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಬೆಂಗಳೂರಿನಲ್ಲಿ ಸಂಜೆ ವೇಳೆಗೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಇಲಾಖೆ ಮುನ್ಸೂಚನೆ ನೀಡಿದೆ.ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 27 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 20 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಮಡಿಕೇರಿಯಲ್ಲಿ ಗರಿಷ್ಠ ತಾಪಮಾನ 25 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ 17 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಲಿದೆ.ನಗರಗಳ ಹವಾಮಾನ ವರದಿ:
ಬೆಂಗಳೂರು: 27-20
ಮಂಗಳೂರು: 32-25
ಶಿವಮೊಗ್ಗ: 33-22
ಬೆಳಗಾವಿ: 32-21
ಮೈಸೂರು: 29-21ಮಂಡ್ಯ: 29-21
ಮಡಿಕೇರಿ: 25-17
ರಾಮನಗರ: 28-21
ಹಾಸನ: 28-19
ಚಾಮರಾಜನಗರ: 28-21
ಚಿಕ್ಕಬಳ್ಳಾಪುರ: 27-19ಕೋಲಾರ: 27-21
ತುಮಕೂರು: 30-21
ಉಡುಪಿ: 32-25
ಕಾರವಾರ: 33-26
ಚಿಕ್ಕಮಗಳೂರು: 28-19
ದಾವಣಗೆರೆ: 32-22ಹುಬ್ಬಳ್ಳಿ: 32-22
ಚಿತ್ರದುರ್ಗ: 32-21
ಹಾವೇರಿ: 33-22
ಬಳ್ಳಾರಿ: 33-23
ಗದಗ: 33-22
ಕೊಪ್ಪಳ: 33-23ರಾಯಚೂರು: 33-23
ಯಾದಗಿರಿ: 33-22
ವಿಜಯಪುರ: 33-22
ಬೀದರ್: 31-20
ಕಲಬುರಗಿ: 33-22
ಬಾಗಲಕೋಟೆ: 34-23Sign in to your account
Username or Email Address


Password

 Remember Me


