ಮಂಡ್ಯ: ಶಾಸಕರು ಯಾರು ಸಹ ಪಕ್ಷದ ಬಗ್ಗೆ ಮಾತನಾಡಬಾರದು ಎಂದು ಡಿಕೆ ಶಿವಕುಮಾರ್ (DK Shivakumar) ಎಚ್ಚರಿಕೆ ನೀಡಿದ್ದರೂ ಮಂಡ್ಯದ ಮದ್ದೂರು ಶಾಸಕ‌ ಕದಲೂರು ಉದಯ್ (Kadalur Uday) ಡಿ.ಕೆ.ಶಿವಕುಮಾರ್ ಸಿಎಂ ಆಗುವುದರಲ್ಲಿ ಯಾವುದೇ ಅನುಮಾನವಿಲ್ಲ. ಸಿಎಂ ಆಗುವ ಅರ್ಹತೆ ಡಿಕೆಶಿಯವರಿಗೆ ಇದೆ ಎಂದು ಪುನರುಚ್ಚಾರ ಮಾಡಿದ್ದಾರೆ.ಮದ್ದೂರಿನಲ್ಲಿ ಮಾತನಾಡಿದ ಶಾಸಕ ಉದಯ್, ಡಿಸಿಎಂ‌ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿ (Chief Minister) ಆಗಬೇಕು ಎಂಬುದು ನಮ್ಮ ಆಸೆ. ಎಲ್ಲವೂ ಹೈಕಮಾಂಡ್ ನಿರ್ಧಾರ ಎಂದು ಹೇಳಿ ಮತ್ತೆ ಡಿಕೆಶಿ ಪರ ಬ್ಯಾಟ್‌ ಬೀಸಿದ್ದಾರೆ. 
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರವನ್ನು (Congress Government) ಪೂರ್ಣ ಬಹುಮತದೊಂದಿಗೆ ಅಧಿಕಾರಕ್ಕೆ ತರಲು ಡಿಕೆಶಿ ಕಾರಣ. ಕೆಪಿಸಿಸಿ ಅಧ್ಯಕ್ಷರಾಗಿ ಪಕ್ಷ ಸಂಘಟನೆಗೆ ಸಾಕಷ್ಟು ದುಡಿದಿದ್ದಾರೆ. ರಾಜ್ಯದಲ್ಲಿ 135 ಸ್ಥಾನಗಳನ್ನು ಪಡೆದುಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ರಾಜಕೀಯಕ್ಕೆ ಪಾದಾರ್ಪಣೆ ಮಾಡಿದ್ದಾಗಿನಿಂದಲೂ ಸೋಲಿಲ್ಲದ ಸರದಾರ ಎಂದೇ ಖ್ಯಾತರಾಗಿದ್ದಾರೆ. ಸಾತನೂರು, ಕನಕಪುರಗಳಂತಹ ಪ್ರಬಲ ಕ್ಷೇತ್ರಗಳಲ್ಲಿ ಅವರು ಗೆಲುವು ಸಾಧಿಸಿದ್ದಾರೆ. ಘಟಾನುಘಟಿ ಅಭ್ಯರ್ಥಿಯಾಗಿದ್ದಂತಹ ಪಿಜಿಆರ್ ಸಿಂಧ್ಯಾ ಅವರಿಗೆ ಸೋಲುಣಿಸಿದ್ದಾರೆ ಎಂದರು.  ಇದನ್ನೂ ಓದಿ: ಬೆಂಗಳೂರಿನಲ್ಲಿ ಚಾಕು ಇರಿದು ಉಪನಿರ್ದೇಶಕಿಯ ಬರ್ಬರ ಹತ್ಯೆಇಲ್ಲಿಯವರೆಗೂ ಕಾಂಗ್ರೆಸ್ ಪಕ್ಷದ ಬಗ್ಗೆ ಅಪಾರ ಪ್ರೀತಿ ಇದೆ. ಪಕ್ಷವನ್ನು ಉಳಿಸಿ ಬೆಳೆಸಬೇಕೆಂಬ ಸಾಕಷ್ಟು ಇಚ್ಚಾಶಕ್ತಿ ಇದೆ. ಪಕ್ಷ ಸಂಘಟನೆಗಾಗಿ ಮುಖಂಡರು ಹಾಗೂ ಕಾರ್ಯಕರ್ತರಿಗೆ ಹುಮ್ಮಸ್ಸು ನೀಡುತ್ತಿದ್ದಾರೆ. ಹೀಗಾಗಿ ಅವರನ್ನು ಮುಖ್ಯಮಂತ್ರಿಯನ್ನಾಗಿ ಮಾಡಿದರೆ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಮತ್ತಷ್ಟು ಗಟ್ಟಿಯಾಗಿ ಬೇರೂರುತ್ತದೆ ಎಂದು ಕದಲೂರು ಉದಯ್ ಹೇಳಿದರು. Sign in to your account
Username or Email Address


Password

 Remember Me


