ಬೆಂಗಳೂರು: ಮಾಜಿ ಸಿಎಂ ಎಚ್‍ಡಿ ಕುಮಾರಸ್ವಾಮಿ ಮನೆಗೆ ಕಿಚ್ಚ ಸುದೀಪ್ ಭೇಟಿ ನೀಡಿದ್ದಾರೆ.ಕಿಚ್ಚ ಸುದೀಪ್ ಬೆಂಗಳೂರಿನಲ್ಲಿರುವ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್‍ಡಿಕೆ ಮನೆಗೆ ಭೇಟಿ ನೀಡಿ 2 ಗಂಟೆಗಳ ಕಾಲ ಸುದೀರ್ಘ ಚರ್ಚೆ ನಡೆಸಿದ್ದಾರೆ. ರಾಜಕೀಯ ವಿದ್ಯಮಾನಗಳ ಹಾಗೂ ಜೆಡಿಎಸ್ ಪರ ಪ್ರಚಾರ ಮಾಡುವ ಬಗ್ಗೆಯೂ ಚರ್ಚೆ ನಡೆದಿದೆ ಎಂದು ಹೇಳಲಾಗಿದೆ.ಸುದೀಪ್ ಸಕ್ರಿಯ ರಾಜಕಾರಣದ ಬಗ್ಗೆ ಒಲವು ತೋರಲಿಲ್ಲ. ಆದರೆ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿಗಳ ಪರ ಪ್ರಚಾರ ಮಾಡಲಿದ್ದು, ಸ್ಟಾರ್ ಕ್ಯಾಂಪೇನರ್ ಆಗೋ ಸಾಧ್ಯತೆಯಿದೆ. ಭೇಟಿ ವೇಳೆ ಇವರಿಬ್ಬರು ಯಾವ ವಿಚಾರದ ಬಗ್ಗೆ ಚರ್ಚೆ ನಡೆಸಿದ್ದಾರೆ ಎನ್ನುವ ಬಗ್ಗೆ ಅಧಿಕೃತವಾಗಿ ಯಾರು ಹೇಳಿಕೆ ನೀಡಿಲ್ಲ.ಈ ಹಿಂದೆ ಬೆಂಗಳೂರು ಹೊರವಲಯ ನೆಲಮಂಗಲ ಶಾಸಕ ಶ್ರೀನಿವಾಸಮೂರ್ತಿ ಕಿಚ್ಚ ಸುದೀಪ್ ಅವರನ್ನು ಭೇಟಿ ಮಾಡಿದ್ದರು. ಶಾಸಕ ಶ್ರೀನಿವಾಸಮೂರ್ತಿ ಹಾಗೂ ಸುದೀಪ್ ಭೇಟಿಯಾದ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು.Sign in to your account
Username or Email Address


Password

 Remember Me


