ಮಂಡ್ಯ: ಅಪರಿಚಿತ ವ್ಯಕ್ತಿಯೊಬ್ಬ ವಿದ್ಯುತ್ ಕಂಬದ ಮೇಲೆ ಹತ್ತಿ ಆತ್ಮಹತ್ಯೆ ಮಾಡಿಕೊಂಡಿರುವ ವಿಚಿತ್ರ ಘಟನೆ ಜಿಲ್ಲೆಯ ಮದ್ದೂರು ತಾಲೂಕಿನ ಉಪ್ಪಿನಕೆರೆ ಗೇಟ್ ಬಳಿ ನಡೆದಿದೆ.ಅಪರಿಚಿತ ವ್ಯಕ್ತಿಯನ್ನು ಸುಮಾರು 45 ವರ್ಷದ ವ್ಯಕ್ತಿ ಎಂದು ಗುರುತಿಸಲಾಗಿದೆ. ಈತ ಮದ್ದೂರು ಕೆಎಂದೊಡ್ಡಿ ರಸ್ತೆಯಲ್ಲಿ ಬರುವ ಉಪ್ಪಿನಕೆರೆ ಗೇಟ್ ಬಳಿ ತಡರಾತ್ರಿ ಲೈಟ್ ಕಂಬ ಹತ್ತಿದ್ದಾನೆ. ನಂತರ ವಿದ್ಯುತ್ ತಂತಿ ಹಿಡಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ. ಇಂದು ಮುಂಜಾನೆ ಸ್ಥಳೀಯರು ನೋಡಿದಾಗ ಈ ಪ್ರಕರಣ ಬೆಳಕಿಗೆ ಬಂದಿದೆ.ಸ್ಥಳೀಯರು ಪೊಲೀಸರಿಗೆ ಮಾಹಿತಿ ತಿಳಿಸಿದ್ದಾರೆ. ವಿಚಾರ ತಿಳಿದ ಮದ್ದೂರು ಪೊಲೀಸರು ಮತ್ತು ವಿದ್ಯುತ್ ಇಲಾಖೆ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿದ್ದಾರೆ. ಲೈಟ್ ಕಂಬದ ಮೇಲಿಂದ ವ್ಯಕ್ತಿಯ ಮೃತ ದೇಹವನ್ನು ಕೆಳಗೆ ಇಳಿಸಿದ್ದಾರೆ.ಈ ಘಟನೆ ಸಂಬಂಧ ಮದ್ದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


 Advertisement 







 Advertisement 




Sign in to your account
Username or Email Address


Password

 Remember Me


