ಚಿಕ್ಕಮಗಳೂರು: ಸಾಲಬಾಧೆ ತಾಳಲಾರದೇ ರೈತ ಮಹಿಳೆ ಕೆರೆಗೆ ಹಾರಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಜಿಲ್ಲೆಯ ಮೂಡಿಗೆರೆ ತಾಲೂಕಿನ ಬೈದುವಳ್ಳಿ ಗ್ರಾಮದಲ್ಲಿ ನಡೆದಿದೆ.ಗ್ರಾಮದ 38 ವರ್ಷದ ಮೋಹನ್ ಕುಮಾರಿ ಆತ್ಮಹತ್ಯೆಗೆ ಶರಣಾದ ಮಹಿಳೆ. ಇವರು ಹಲವು ವರ್ಷಗಳಿಂದ ಕೃಷಿಯಲ್ಲಿ ತಮ್ಮ ಬದುಕು ಕಟ್ಟಿಕೊಂಡಿದ್ದರು. ಆದರೆ ಮಳೆಯಿಲ್ಲದೆ ಬರಗಾಲದ ಹಿನ್ನಲ್ಲೆಯಲ್ಲಿ ಕಾಫಿ-ಮೆಣಸು ಬೆಳೆ ಬರಲಿಲ್ಲ. ಅಷ್ಟೇ ಅಲ್ಲದೇ ಮೋಹನ್ ಕುಮಾರಿ, ಕಾವೇರಿ ಗ್ರಾಮೀಣ ಬ್ಯಾಂಕಿನಲ್ಲಿ ಸುಮಾರು ಐದು ಲಕ್ಷ ಸಾಲ ಮಾಡಿದ್ದರು.ಒಂದು ಕಡೆ ಬೆಳೆ ಬರಲಿಲ್ಲ. ಇನ್ನೊಂದೆಡೆ ಸಾಲ ತೀರಿಸಲಾಗದೇ ಮೋಹನ್ ಕುಮಾರಿ ಮನನೊಂದು ಆತ್ಮಹತ್ಯೆಗೆ ಶರಣಾಗಿದ್ದಾರೆ. ಈ ಸಂಬಂಧ ಗೋಣಿಬೀಟು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


 Advertisement 




 Advertisement 






 Advertisement 




Sign in to your account
Username or Email Address


Password

 Remember Me


