ಬಳ್ಳಾರಿ: ಇಂಜಿನಿಯರಿಂಗ್ ವಿದ್ಯಾರ್ಥಿಯೊಬ್ಬ ಇಬ್ಬರನ್ನು ಪ್ರೀತಿ ಮಾಡಿ ಈಗ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ.ಆಕಾಶ್ ಆತ್ಮಹತ್ಯೆಗೆ ಶರಣಾದ ಎಂಜಿನಿಯರಿಂಗ್ ವಿದ್ಯಾರ್ಥಿ. ಈತ ಬಳ್ಳಾರಿಯ ಬಿಐಟಿಎಂ ಕಾಲೇಜಿನಲ್ಲಿ ಸಿವಿಲ್ ಎಂಜಿನಿಯರಿಂಗ್ ಓದುತ್ತಿದ್ದನು. ಆಕಾಶ್ ಇಬ್ಬರು ಹುಡುಗಿಯರನ್ನು ಪ್ರೀತಿ ಮಾಡುತ್ತಿದ್ದ. ಕೊನೆಗೆ ಇಬ್ಬರಿಗೂ ವಿಷಯ ತಿಳಿದ ಪರಿಣಾಮ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ವಿದ್ಯಾರ್ಥಿಗಳು ಮಾತನಾಡಿಕೊಳ್ಳುತ್ತಿದ್ದಾರೆ.ಆಕಾಶ್ ಮೂಲತಃ ಗಂಗಾವತಿಯ ಕಾರಟಗಿ ನಿವಾಸಿಯಾಗಿದ್ದನು. ಆದರೆ ಕಳೆದ ಸೋಮವಾರ ಅನುಮಾನಸ್ಪದ ರೀತಿಯಲ್ಲಿ ಕಾಲೇಜು ಪಕ್ಕದ ಅಲ್ಲಿಪುರ ಕೆರೆಯಲ್ಲಿ ಈತನ ಶವ ಪತ್ತೆಯಾಗಿತ್ತು. ನಂತರ ಆಕಾಶ್ ಕುಟುಂಬದವರು ಬಳ್ಳಾರಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ದೂರು ದಾಖಲು ಮಾಡಿದ್ದರು.ಆಕಾಶ್ ಆತ್ಮಹತ್ಯೆ ಮಾಡಿಕೊಂಡಿದ್ದಾನೋ ಅಥವಾ ಕೊಲೆಯಾಗಿದ್ದನೋ ಎನ್ನುವ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಈ ಮಧ್ಯೆ ಆಕಾಶ್ ಇಬ್ಬರು ಹುಡುಗಿಯರ ಜೊತೆಗೆ ಲವಿಡವ್ವಿ ಮಾಡಿ ಸಿಕ್ಕಿಕೊಂಡಿದ್ದಕ್ಕೆ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಎಂದು ವಿದ್ಯಾರ್ಥಿಗಳು ಮಾತನಾಡಿಕೊಳ್ಳುತ್ತಿದ್ದಾರೆ ಎಂದು ಮೂಲಗಳು ಮಾಹಿತಿ ನೀಡಿವೆ.






 Advertisement 




Sign in to your account
Username or Email Address


Password

 Remember Me


